ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಂತಕುಮಾರ ಹೆಗಡೆಯನ್ನು ಬಿಜೆಪಿಯಿಂದ ಉಚ್ಚಾಟಿಸಲಿ: ಮಂಕಾಳ ವೈದ್ಯ

Published 11 ಮಾರ್ಚ್ 2024, 5:10 IST
Last Updated 11 ಮಾರ್ಚ್ 2024, 5:10 IST
ಅಕ್ಷರ ಗಾತ್ರ

ಕಾರವಾರ: ಸಂವಿಧಾನ ತಿದ್ದುಪಡಿ ಮಾಡುವ ಮಾತುಗಳನ್ನಾಡಿರುವ ಸಂಸದ ಅನಂತಕುಮಾರ ಹೆಗಡೆ ಅವರನ್ನು ಬಿಜೆಪಿ ತಕ್ಷಣ ಉಚ್ಚಾಟಿಸಲಿ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಹೇಳಿದರು.

'ಅನಂತಕುಮಾರ ಅವರನ್ನು ಪಕ್ಷದಿಂದ ಉಚ್ಛಾಟಿಸದಿದ್ದರೆ ಬಿಜೆಪಿಯು ಸಂವಿಧಾನ ಬದಲಿಸುವ ರಹಸ್ಯ ಕಾರ್ಯಸೂಚಿ ಹೊಂದಿದೆ ಎಂಬುದು ಸ್ಪಷ್ಟವಾದಂತೆ' ಎಂದು ಇಲ್ಲಿ ಸೋಮವಾರ ಮಾಧ್ಯಮದವರ ಜತೆ ಮಾತನಾಡುತ್ತ ಹೇಳಿದರು.

'ದೇಶದಲ್ಲಿ ಸಂವಿಧಾನ ಬದಲಿಸಿ, ಬ್ರಿಟಿಷ್ ಮಾದರಿಯ ಆಡಳಿತ ವ್ಯವಸ್ಥೆ ತರುವ ಉದ್ದೇಶ ಬಿಜೆಪಿಗೆ ಇದ್ದಂತಿದೆ. ದೇಶವನ್ನು ಅಂಬಾನಿ, ಅದಾನಿಯಂತಹ ಉದ್ಯಮಿಗಳಿಗೆ ಮಾರುವ ಉದ್ದೇಶವೂ ಅವರಿಗೆ (ಬಿಜೆಪಿ) ಇದ್ದಿರಬಹುದು ಎಂಬುದು ಸಂಸದರ ಹೇಳಿಕೆಯಿಂದ ಅರ್ಥವಾಗುತ್ತಿದೆ' ಎಂದು ಟೀಕಿಸಿದರು.

'ಸಂಸದ ಅನಂತಕುಮಾರ ಹೆಗಡೆಯಾಗಲಿ, ನಾವಾಗಲಿ ಜನಪ್ರತಿನಿಧಿಗಳಾಗಿದ್ದು ಸಂವಿಧಾನದಿಂದ. ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದವರು ಸಂವಿಧಾನವನ್ನೇ ಬದಲಿಸುವ ಮಾತುಗಳನ್ನಾಡುವುದು ಸರಿಯಲ್ಲ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT