ಅಂಕೋಲಾ: ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಮೇಲೆ ಪಟ್ಟಣದ ಕೇಣಿ ರಸ್ತೆಯಲ್ಲಿ ಅಪರಿಚಿತರ ಗುಂಪು ಹಲ್ಲೆ ನಡೆಸಿದೆ.

'ಕ್ಷೌರದ ಅಂಗಡಿಗೆ ಸಾಗುತ್ತಿದ್ದ ವೇಳೆ ಗೋಪಾಲಕೃಷ್ಣ ಅವರನ್ನು ಅಡ್ಡಗಟ್ಟಿದ ಗುಂಪು ಮಾರಕಾಸ್ತ್ರಗಳಿಂದ ಹಲ್ಲೆಗೈದು, ಪರಾರಿಯಾಗಿದೆ. ತಲೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

'ಗೋವಾ ನೋಂದಣಿಯ ಕಾರಿನಲ್ಲಿ ಆರೋಪಿಗಳು ಬಂದಿದ್ದರು. ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ. ಆರು ಮಂದಿ ಗುಂಪಿನಲ್ಲಿದ್ದರು ಎಂಬುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ' ಎಂದು ಮಾಹಿತಿ ನೀಡಿದ್ದಾರೆ.

ಗೋಪಾಲಕೃಷ್ಣ ಈ ಹಿಂದೆ ಕೆಪಿಸಿಸಿ ಕಾರ್ಯದರ್ಶಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.