ಶಿರಸಿ: ಬೆಂಗಳೂರಿಗೆ ಹೋಗಿ ಬಂದಿದ್ದ ವ್ಯಕ್ತಿಯೊಬ್ಬರಿಗೆ ಶುಕ್ರವಾರ ಕೋವಿಡ್ 19 ಕಾಯಿಲೆ ದೃಢಪಟ್ಟ ಹಿನ್ನೆಲೆಯಲ್ಲಿ ಇಲ್ಲಿನ ಮರಾಠಿಕೊಪ್ಪದ ವಿಶಾಲ ನಗರ ಹಾಗೂ ಎರಡು ಆಸ್ಪತ್ರೆಗಳನ್ನು ಸೀಲ್‌ಡೌನ್ ಮಾಡಲಾಗಿದೆ.

ಬಂಗಾರದ ಕೆಲಸ ಮಾಡುತ್ತಿದ್ದ ಈ ಸೋಂಕಿತ ವ್ಯಕ್ತಿ ಜೂನ್ 23ರಂದು ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಿ, ಮರುದಿನ ವಾಪಸ್ಸಾಗಿದ್ದರು. ನಂತರ ಜ್ವರ ಕಾಣಿಸಿಕೊಂಡ ಕಾರಣ ಅವರು, ಜೂನ್ 29ರಂದು ಕ್ಲಿನಿಕ್‌ಗೆ ಹೋಗಿ ಔಷಧ ತಂದಿದ್ದರು. ಚಿಕಿತ್ಸೆ ನೀಡಿದ ವೈದ್ಯರು, ಈ ವಿಷಯವನ್ನು ತಾಲ್ಲೂಕು ಆಸ್ಪತ್ರೆಯ ಗಮನಕ್ಕೆ ತಂದಿದ್ದರಿಂದ, ಜ್ವರಪೀಡಿತ ವ್ಯಕ್ತಿಯ ಗಂಟಲು ದ್ರವ ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಹೋಂ ಕ್ವಾರಂಟೈನ್‌ನಲ್ಲಿರುವ ಅವರನ್ನು, ಕಾರವಾರ ಕ್ರಿಮ್ಸ್‌ಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತ ವ್ಯಕ್ತಿಯ ಮನೆ ಇರುವ ಪ್ರದೇಶ ಮತ್ತು ಚಿಕಿತ್ಸೆ ಪಡೆಯಲು ಹೋಗಿದ್ದ ಒಂದು ಕ್ಲಿನಿಕ್ ಹಾಗೂ ಒಂದು ಆಸ್ಪತ್ರೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಚಿಕಿತ್ಸೆ ನೀಡಿರುವ ವೈದ್ಯರ ಗಂಟಲು ದ್ರವ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.