ಕಾರವಾರ: ತೋಟಗಾರಿಕೆ ಇಲಾಖೆಯು 2023ನೇ ಸಾಲಿನ ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ವಿಮೆ ಕಂತನ್ನು ಪಾವತಿಸುವ ಅವಧಿಯನ್ನು ಆ.7ರ ವರೆಗೆ ವಿಸ್ತರಿಸಿದೆ.
ಈ ಹಿಂದೆ ಜುಲೈ 31ಕ್ಕೆ ಕಂತು ಪಾವತಿಗೆ ಕೊನೆಯ ದಿನವಾಗಿತ್ತು. ರೈತರ ಹಿತದೃಷ್ಟಿಯಿಂದ ಅವಧಿ ವಿಸ್ತರಿಸಲಾಗಿದೆ.
ರೈತರು ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿ ಅಥವಾ ಬ್ಯಾಂಕ್ ಶಾಖೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ತೋಟಗಾರಿಕಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.