ಮುಂಡಗೋಡ (ಉತ್ತರ ಕನ್ನಡ ಜಿಲ್ಲೆ): ‘ಯುವ ಪೀಳಿಗೆಯು ಟಿಬೆಟಿಯನ್ ಧರ್ಮಗುರು ದಲೈ ಲಾಮಾ ಅವರ ಪರಸ್ಪರ ಸಹಾನುಭೂತಿ, ನೈತಿಕ ಜೀವನದ ಸಂದೇಶವನ್ನು ಮುಂದಕ್ಕೆ ಕೊಂಡೊಯ್ಯಬೇಕು’ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದರು.

ತಾಲ್ಲೂಕಿನ ಟಿಬೆಟಿಯನ್ ಕ್ಯಾಂಪ್ ನಂ. 6ರ ಡ್ರೆಪುಂಗ್ ಲೋಸಲಿಂಗ್ ಬೌದ್ಧ ಮಂದಿರದಲ್ಲಿ ದಲೈ ಲಾಮಾ ಅವರ 90ನೇ ಜನ್ಮದಿನದ ಪ್ರಯುಕ್ತ ಭಾನುವಾರ ಆಯೋಜಿಸಿದ್ದ ವಿದ್ವಾಂಸರ ಸಮ್ಮೇಳನದಲ್ಲಿ ಅವರು ಮಾತನಾಡಿದರು.

‘ದಲೈಲಾಮಾ ಅವರ ಜೀವನದ ಮೈಲಿಗಲ್ಲನ್ನು ಸದಾ ಸ್ಮರಿಸಬೇಕು. ಅವರ ಸಂದೇಶವಾದ ಕರುಣೆ, ಶಾಂತಿ, ಬುದ್ಧಿವಂತಿಕೆ ಮತ್ತು ಮಾನವೀಯತೆ ಗುಣಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಅವರು ಹೇಳಿದರು.

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಶಿವರಾಮ ಹೆಬ್ಬಾರ, ಬೌದ್ಧ ಮಂದಿರದ ಗಾಡೆನ್ ತ್ರಿ ರಿನ್ಪೋಚೆ ಮತ್ತು ಹಿರಿಯ ಭಿಕ್ಕುಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.