ಕಾರವಾರ: ದಾಂಡೇಲಿ ನಗರದಲ್ಲಿ ಆಶ್ರಯ ಯೋಜನೆ ಅಡಿಯಲ್ಲಿ 1,106 ಮನೆಗಳ ಕಾಮಗಾರಿ ಪೂರ್ಣಗೊಳಿಸಲು ವಿಶೇಷ ಅನುದಾನ ಮಂಜೂರು ಮಾಡಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆ ಈಡೇರಿಸಲು ಒತ್ತಾಯಿಸಿ ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.

‘ದಾಂಡೇಲಿ ತಾಲ್ಲೂಕಿನಲ್ಲಿ ನಡೆದಿರುವ ಭೂ ಹಗರಣಗಳ ತನಿಖೆಯನ್ನು ಲೋಕಾಯುಕ್ತ ಸಂಸ್ಥೆ ನಡೆಸಬೇಕು. ತಾಲ್ಲೂಕು ಮಟ್ಟದ ಕಚೇರಿಗಳನ್ನು ಪ್ರಾರಂಭಿಸಬೇಕು. ಇಎಸ್ಐ ಆಸ್ಪತ್ರೆ ವೈದ್ಯರ ಕೊರತೆ ಸಮಸ್ಯೆ ಪರಿಹರಿಸಬೇಕು’ ಎಂದು ಒತ್ತಾಯಿಸಿದರು.

‘ಕರ್ನಾಟಕ ಗೃಹ ಮಂಡಳಿಯು ಜಿಲ್ಲೆಯಲ್ಲಿ ಮನೆ ಮತ್ತು ನಿವೇಶನ ನೀಡುವ ಭರವಸೆ ನೀಡಿ ದಶಕ ಕಳೆದರೂ, ಈವರೆಗೂ ಫಲಾನುಭವಿಗಳಿಗೆ ಯಾವುದೇ ಸೌಲಭ್ಯ ಒದಗಿಸಿಲ್ಲ. 2010-13ರ ಅವಧಿಯಲ್ಲಿ ಮನೆ ನಿವೇಶನಕ್ಕಾಗಿ ಸಮೀಕ್ಷೆ ನಡೆಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಪ್ರಕ್ರಿಯೆಯಲ್ಲಿ ಜಿಲ್ಲೆಯಲ್ಲಿ ಸುಮಾರು 22,545 ಅರ್ಜಿದಾರರು ನಿಗದಿತ ಅರ್ಜಿ ಶುಲ್ಕದೊಂದಿಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದರು. ಅರ್ಜಿದಾರರಿಂದ ಅಂದಾಜು ₹2.25 ಕೋಟಿಗೂ ಅಧಿಕ ಮೊತ್ತದ ಶುಲ್ಕ ಸಂಗ್ರಹಿಸಲಾಗಿದ್ದರೂ, ಈವರೆಗೂ ನಿವೇಶನ ಹಂಚಿಕೆಯ ಬಗ್ಗೆ ಗೃಹ ಮಂಡಳಿ ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ’ ಎಂದು ಹೋರಾಟ ಸಮಿತಿ ಅಧ್ಯಕ್ಷ ಅಕ್ರಂ ಖಾನ್ ಆರೋಪಿಸಿದರು.

‘2016ರಲ್ಲಿ ದಾಂಡೇಲಿ ನಗರಸಭೆಯಿಂದ 10 ಎಕರೆ ಭೂಮಿಯನ್ನು ಗೃಹ ಮಂಡಳಿಗಾಗಿ ಕಾಯ್ದಿರಿಸಲಾಗಿತ್ತು. ಆದರೆ, ಕಾಯ್ದಿರಿಸಿದ ಭೂಮಿಯಲ್ಲಿ ಸದ್ಯ ಅತಿಕ್ರಮಣ ಚಟುವಟಿಕೆಗಳು ನಡೆಯುತ್ತಿವೆ. ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು ಪ್ರತಿಭಟನಾಕಾರರು ದೂರಿದರು. ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್ ಅವರಿಗೆ ಮನವಿ ಸಲ್ಲಿಸಿದರು.

ಅಶೋಕ ಪಾಟೀಲ, ರಾಜೆಶ ನಾಯ್ಕ, ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-20-1314202600

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.