ದಾಂಡೇಲಿ: ನಗರದ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಶಾಸಕ ಆರ್.ವಿ. ದೇಶಪಾಂಡೆ ಮಾರ್ಗದರ್ಶನದಲ್ಲಿ ಸ್ವಚ್ಛತಾ ಅಭಿಯಾನದಿಂದ ನಿರಂತರವಾಗಿ ಜನ ಜಾಗೃತಿ ಮೂಡಿಸಲಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಕಸ ಹಾಕುವವರ ಮೇಲೆ ನಗರಸಭೆ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ಪೌರಾಯುಕ್ತ ವಿವೇಕ ಬನ್ನೆ ತಿಳಿಸಿದ್ದಾರೆ.

ಕಳೆದ ಒಂದು ತಿಂಗಳಿನಲ್ಲಿ ಸಾರ್ವಜನಿಕ ಸ್ಥಳ ಹಾಗೂ ಖಾಲಿ ಜಾಗಗಳಲ್ಲಿ 35 ಜನರು ಕಸವನ್ನು ಚೆಲ್ಲಿದ್ದು ಕಂಡುಬಂದಿದ್ದು, ಪದೇ ಪದೇ ಕಸ ಹಾಕುತ್ತಿರುವ 21 ಜನರಿಗೆ ನೋಟಿಸ್ ನೀಡಲಾಗಿದೆ. 14 ಜನರಿಂದ ₹7,500 ದಂಡ ಪಡೆಯಲಾಗಿದೆ. ಇಬ್ಬರಿಗೆ ನೋಟಿಸ್ ನೀಡಿ, ಪ್ರಕರಣ ದಾಖಲಿಸಲಾಗಿದೆ. ಕಸ ಚೆಲ್ಲುವ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ, ಸಿಬ್ಬಂದಿ ನಿಯೋಜಿಸುವ ಮೂಲಕ ಕಸ ಹಾಕುವವರ ಮೇಲೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಹಾಗಾಗಿ, ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಹಾಕುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದಿದ್ದಾರೆ.

ನಗರದಲ್ಲಿ ಮನೆ ಮನೆ ಕಸ ಸಂಗ್ರಹಣೆ ನಡೆಯುತ್ತಿದ್ದು, ಶೇ 99ರಷ್ಟು ಜನರು ಸಹಕರಿಸುತ್ತಿದ್ದು, ಕೇವಲ ಶೇ 1 ಜನರಿಂದ ಸ್ವಚ್ಛತೆಗೆ ತೊಂದರೆಯಾಗುತ್ತಿದೆ. ನಗರದ ಸಂಪೂರ್ಣ ಸ್ವಚ್ಛತೆಗೆ ನಗರಸಭೆಯ ಜೊತೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ತಿಳಿಸಿದ್ದಾರೆ.

ಪೌರಾಯುಕ್ತ ಮಾರ್ಗದರ್ಶನದಲ್ಲಿ ಆರೋಗ್ಯ ನಿರೀಕ್ಷಕ ವಿಲಾಸ ದೇವಕರ, ಪರಿಸರ ವಿಭಾಗದ ಶುಭಂ ರಾಯ್ಕರ ಹಾಗೂ ಪೌರ ಕಾರ್ಮಿಕರ ನೇತೃತ್ವದಲ್ಲಿ ವಾರ್ಡ್ ವಾರು ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-20-1141859205

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.