ದಾಂಡೇಲಿ: ‘ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂದರೆ ಉತ್ತಮ ಆರೋಗ್ಯ ಮುಖ್ಯ. ಅದಕ್ಕಾಗಿ, ಪ್ರತಿದಿನ ವ್ಯಾಯಾಮಕ್ಕೆ ಸಮಯ ಮೀಸಲಿಡಬೇಕು. ಆಗ ಮಾತ್ರ ಬದುಕು ಸುಂದರವಾಗಲಿದೆ’ ಎಂದು ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.

‘ಸದೃಢ ಆರೋಗ್ಯ ಮತ್ತು ಸ್ವಚ್ಛ ಪರಿಸರ ನಿರ್ಮಾಣ’ ಧ್ಯೇಯದೊಂದಿಗೆ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ಹಾಗೂ ರೋಟರಿ ಕ್ಲಬ್ ಆಶ್ರಯದಡಿ ಭಾನುವಾರ ಇಲ್ಲಿ ನಡೆದ 5 ಕಿ.ಮೀ ಫನ್ ರನ್–ವೆಸ್ಕೋ ರನ್ ಫಾರ್ ಹೆಲ್ತ್ ಮ್ಯಾರಥಾನ್ಗೆ ಚಾಲನೆ ನೀಡಿ ಮಾತನಾಡಿದರು.

‘ಒತ್ತಡದ ಬದುಕಿನಲ್ಲಿಯೂ ನಿತ್ಯ ನಡಿಗೆ ಹಾಗೂ ದೈಹಿಕ ಚಟುವಟಿಕೆಗಳಿಗೆ ಆದ್ಯತೆ ನೀಡಿದರೆ, ಆರೋಗ್ಯ ಗಳಿಸಬಹುದು’ ಎಂದರು.

ವೆಸ್ಟ್ ಕೋಸ್ಟ್ ಪೇಪರ್ ಮಿಲ್ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಜೈನ್ ಮಾತನಾಡಿ, ‘ಆಧುನಿಕ ಬದುಕಿನಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಪ್ರತಿ ವರ್ಷ ಮ್ಯಾರಥಾನ್ ಆಯೋಜಿಸಲು ನಿರ್ಧರಿಸಲಾಗಿದೆ’ ಎಂದು ಹೇಳಿದರು.

ತಹಶೀಲ್ದಾರ್ ಶೈಲೇಶ್ ಪರಮಾನಂದ, ಪೌರಾಯುಕ್ತ ವಿವೇಕ್ ಬನ್ನೆ, ಡಿವೈಎಸ್ಪಿ ಶಿವಾನಂದ ಮದರಖಂಡಿ, ಸಿಪಿಐ ಶಿವಾನಂದ ಅಂಬೀಗೇರ, ಪಿಎಸ್ಐಗಳಾದ ಅಮೀನ್ ಅತ್ತಾರ, ಜಗದೀಶ್ ನಾಯಕ, ಶಿವಾನಂದ ನಾವಲಗಿ, ವೆಸ್ಟ್ ಕೋಸ್ಟ್ ಪೇಪರ್ ಮಿಲ್ನ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ರಾಜೇಶ ತಿವಾರಿ, ರಾಘವೇಂದ್ರ ಜಿ.ಆರ್., ರೋಟರಿ ಕ್ಲಬ್ ಅಧ್ಯಕ್ಷ ಅಶುತೋಷ್ ಕುಮಾರ್ ರಾಯ್, ಪ್ರಧಾನ ಕಾರ್ಯದರ್ಶಿ ಮಿಥುನ್ ನಾಯಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-20-516926375

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.