ಕಾರವಾರ: ‘ದಾಂಡೇಲಿ ನಗರದಲ್ಲಿ ಸ್ಥಗಿತಗೊಂಡಿರುವ ಜಿ+2 ಮನೆಗಳ ಕಾಮಗಾರಿ ಪೂರ್ಣಗೊಳಿಸಲು ವಿಶೇಷ ಅನುದಾನ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಏ.8ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಅಕ್ರಂ ಖಾನ್ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಿವೇಶನ ರಹಿತ, ಬಡ ಕುಟುಂಬಗಳಿಗೆ ಸ್ವಂತ ಸೂರು ಪಡೆಯಲು ಆಶ್ರಯ ಯೋಜನೆ ಅಡಿಯಲ್ಲಿ ಬಹಮಹಡಿಯ ವಸತಿ ಸಮುಚ್ಚಯ ಕಟ್ಟುವ ಯೋಜನೆ ಹಲವು ವರ್ಷ ಕಳೆದರೂ ಪೂರ್ಣಗೊಳಿಸಿಲ್ಲ. ಬಡವರಿಂದ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಸರಾಸರಿ ₹50 ಸಾವಿರದಿಂದ ₹60 ಸಾವಿರ ಹಣ ಪಡೆದು, ಅರ್ಜಿ ಪಡೆದು ದಶಕ ಕಳೆದಿದೆ. ಈವರೆಗೂ ಮನೆ ಹಂಚಿಕೆ ನಡೆದಿಲ್ಲ’ ಎಂದು ದೂರಿದರು.

‘ಹಲವು ಬಾರಿ ಸ್ಥಳೀಯ ಶಾಸಕರು ಸೇರಿದಂತೆ ಸರ್ಕಾರಕ್ಕೆ ಮನವಿ ನೀಡಲಾಗಿದೆ. ಈವರೆಗೂ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಹೋರಾಟ ಕೈಗೊಳ್ಳುವುದು ಅನಿವಾರ್ಯವಾಗಿದೆ’ ಎಂದರು.

‘ದಾಂಡೇಲಿಯಲ್ಲಿ ಹಣ ಇದ್ದವರು, ಪ್ರಭಾವ ಇದ್ದವರು ಜಾಗ ಒತ್ತುವರಿ ಮಾಡುತ್ತಿದ್ದಾರೆ. ಬಡವರಲ್ಲದವರಿಗೆ ಪಟ್ಟಾ ಹಂಚಿಕೆ ನಡೆದಿದೆ. ಸ್ಮಶಾನಕ್ಕೆ ಮೀಸಲಿಟ್ಟಿದ್ದ ಜಾಗದ ಪೈಕಿ ಶೇ 80ರಷ್ಟು ಒತ್ತುವರಿಯಾಗಿದೆ’ ಎಂದರು.

ಉಪಾಧ್ಯಕ್ಷ ಅಶೋಕ ಪಾಟೀಲ, ಮಧುಕರ ಸಾಂಗೇಕರ, ನಾಮದೇವ ಶಿಕಾರಿ, ಅಶೋಕ ಗೋಪಾಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-20-2006413829

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.