ದಾಂಡೇಲಿ: ಮಾನವನಾಗಿ ಹುಟ್ಟಿದ ಮೇಲೆ ಮಾನವನಾಗಿ ಬಾಳಬೇಕು. ಸಮಾಜಮುಖಿ ಕೆಲಸಗಳಿಗೆ ಹಣ ಉಪಯೋಗ ಮಾಡಬೇಕು. ಕ್ಷೇತ್ರದಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದಿದ್ದೇನೆ. ಇದರಿಂದಾಗಿ ತಾಲ್ಲೂಕಿನ ಆರ್ಥಿಕ ಸ್ಥಿತಿ ಸುಧಾರಣೆಯಾಗಿದೆ ಎಂದು ಶಾಸಕ ಆರ್.ವಿ ದೇಶಪಾಂಡೆ ಹೇಳಿದರು.

ಕರ್ನಾಟಕ ಸರ್ಕಾರದ ಮುಖ್ಯ ಮಂತ್ರಿಗಳ ಮೂಲಸೌಕರ್ಯ ಅಭಿವೃದ್ದಿ ಯೋಜನೆ ಅನುದಾನ ಅಡಿಯಲ್ಲಿ ₹ 16 ಕೋಟಿ ವಿವಿಧ ಕಾಮಗಾರಿಗಳಿಗೆ ಸೋಮವಾರ ದಾಂಡೇಲಿ ನಗರಸಭೆ ಆವರಣದಲ್ಲಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಜನರಿಗೆ ಅನುಕೂಲವಾಗುವಂತೆ ದೀರ್ಘ ಕಾಲ ಬಾಳಿಕೆ ಬರುವಂತೆ ಗುತ್ತಿಗೆದಾರರು ಕೆಲಸದ ಬಗ್ಗೆ ಎಚ್ಚರ ವಹಿಸಿ ಈ ವಿಷಯದಲ್ಲಿ ರಾಜಿ ಮಾಡಿಕೊಳ್ಳಬಾರದು. ಕಾಮಗಾರಿಗಳನ್ನು ಸಮಯಕ್ಕೆ ಮುಗಿಸಿ, ಕಳಪೆ ಆಗದಂತೆ ಎಚ್ಚರ ವಹಿಸುವುದು ಮುಖ್ಯ ಎಂದ ಅವರು, ಅಭಿವೃದ್ಧಿ ಪರ ನನ್ನ ಚಿಂತನೆ ಇದ್ದೇ ಇರುತ್ತದೆ. ಮೂಲಭೂತ ಸೌಕರ್ಯ ಬಗ್ಗೆ ಕಾಳಜಿ ವಹಿಸುತ್ತೇವೆ ಎಂದರು.

ಪೌರಾಯುಕ್ತ ವಿವೇಕ ಬನ್ನೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಗಣೇಶ ನಗರ ಕ್ರಾಸ್ ಡಾಂಬರೀಕರಣಕ್ಕೆ ₹ 49.95 ಲಕ್ಷ ಮತ್ತು ವಾರ್ಡ 7 ಮತ್ತು 8 ಮರು ಡಾಂಬರೀಕರಣ, ವಾರ್ಡ್ ನಂಬರ್ 20, ಡಾಂಬರೀಕರಣಕ್ಕೆ ₹ 49.93 ಲಕ್ಷ , ವಾರ್ಡ್ 1ರ ಸಿಸಿ ರೋಡ್ ಅಭಿವೃದ್ಧಿಗೆ ₹ 38.90 ಲಕ್ಷ ಸೇರಿದಂತೆ 18 ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ. ಸಿ . ಹಾದಿಮನಿ, ಪಂಚ ಗ್ಯಾರಂಟಿ ಯೋಜನೆಯ ಸಮಿತಿ ಅಧ್ಯಕ್ಷ ರಿಯಾಜ್ ಸೈಯದ್, ತಹಶೀಲ್ದಾರ್ ಶೈಲೇಶ ಪರಮಾನಂದ ಇದ್ದರು.ನಗರಸಭೆ ಕಚೇರಿ ವ್ಯವಸ್ಥಾಪಕ ಪರಶುರಾಮ ಸಿಂಧೆ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-20-874222615

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.