ದಾಂಡೇಲಿ: ‘ಮತದಾನವು ಸಂವಿಧಾನ ನೀಡಿರುವ ಪವಿತ್ರ ಹಕ್ಕು. ಇದನ್ನು ಜಾಗೃತಿಯಿಂದ ಪ್ರಜ್ಞಾವಂತರಾಗಿ ಚಲಾಯಿಸಬೇಕು. ದೇಶದ ಪ್ರಗತಿಗೆ ಹಾಗೂ ಸಂವಿಧಾನಕ್ಕೆ ಗೌರವ ನೀಡುವುದು ಪ್ರತಿಯೊಬ್ಬರ ಕರ್ತವ್ಯ’ ಎಂದು ನಗರದ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಾಲಯ ನ್ಯಾಯಾಧೀಶೆ ತೇಜಸ್ವಿನಿ ಸೊಗಲದ ಹೇಳಿದರು.

ತಾಲ್ಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಅಭಿಯೋಜನಾ ಇಲಾಖೆ, ಕಂದಾಯ ಇಲಾಖೆ, ನಗರ ಸಭೆ, ಶಿಕ್ಷಣ ಇಲಾಖೆ, ತಾಲ್ಲೂಕು ಪಂಚಾಯಿತಿ ಮತ್ತು ಸರ್ಕಾರಿ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ತಹಶೀಲ್ದಾರ್ ಶೈಲೇಶ ಪರಮಾನಂದ ಅಧ್ಯಕ್ಷತೆ ವಹಿಸಿ, ಪ್ರತಿಜ್ಞಾ ವಿಧಿ ಬೋಧಿಸಿದರು.

ಹಿರಿಯ ವಕೀಲ ಸೋಮಕುಮಾರ ಎಸ್., ಸರ್ಕಾರಿ ಅಭಿಯೋಜಕ ರಮೇಶ ಎಮ್. ಬಂಕಾಪುರ ಮತದಾನ ಮತ್ತು ಮತದಾರರ ಹಕ್ಕು ಕುರಿತು ವಿಶೇಷ ಉಪನ್ಯಾಸ ನೀಡಿದರು.

ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಮ್. ದಬಗಾರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಸಿ. ಹಾದಿಮನಿ, ಪೌರಾಯುಕ್ತ ವಿವೇಕ ಬನ್ನೆ ವೇದಿಕೆಯಲ್ಲಿ ಇದ್ದರು. ಶಿಕ್ಷಕಿ ಆಶಾ ದೇಶಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ರಾಘವೇಂದ್ರ ಪಾಟೀಲ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.