ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಲು ಜಾರಿ ಬಿದ್ದು ರೈತ ಸಾವು

Published 7 ಜುಲೈ 2024, 16:26 IST
Last Updated 7 ಜುಲೈ 2024, 16:26 IST
ಅಕ್ಷರ ಗಾತ್ರ

ಭಟ್ಕಳ: ತಾಲ್ಲೂಕಿನ ಹಾಡುವಳ್ಳಿಯಲ್ಲಿ ಭಾನುವಾರ ರೈತರೊಬ್ಬರು ಕೃಷಿ ಚಟುವಟಿಕೆ ಮುಗಿಸಿ ಮನೆಗೆ ಬರುತ್ತಿರುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

ಹಾಡುವಳ್ಳಿ ನಿವಾಸಿ ಮಂಜುನಾಥ ಕುಪ್ಪಯ್ಯ ನಾಯ್ಕ (60) ಮೃತಪಟ್ಟವರು. ಭಾನುವಾರ ಬೆಳಿಗ್ಗೆ 6:45ರ ವೇಳೆಗೆ ತೋಟಕ್ಕೆ ಹೋಗಿದ್ದು, ಮರಳಿ ಮನೆಗೆ ಹಿಂತಿರುಗುತ್ತಿದ್ದಾಗ ಕಾಲು ಜಾರಿ ಬಿದ್ದರು. ತಕ್ಷಣ ಅವರ ಪುತ್ರ ಆಸ್ಪತ್ರೆಗೆ ಕರೆದುಕೊಂಡು ಹೋದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT