ಹಳಿಯಾಳ: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ನಡೆದ ಹಲ್ಲೆ ಹಾಗೂ ಅವಮಾನ ಮಾಡಿದ್ದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್. ಹೆಗಡೆ ಹೇಳಿದರು.

ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನಾರಾಯಣಸ್ವಾಮಿ ಅವರು ಕಲಬುರಗಿಯ ಚಿತ್ತಾಪುರ ಪ್ರವಾಸಿ ಮಂದಿರದಲ್ಲಿ ಇದ್ದಾಗ ಕಾಂಗ್ರೆಸ್ನ ಕೆಲವು ಕಾರ್ಯಕರ್ತರು ಅವರನ್ನು ಅವಾಚ್ಯ ಶಬ್ದದಿಂದ ನಿಂದಿಸಿ, ಕಾರಿಗೆ ಮಸಿಯನ್ನು ಬಳಿದಿದ್ದಾರೆ. ನೂರಾರು ಪೊಲೀಸರ ನಡುವೆಯೇ ಇಂತಹ ಘಟನೆ ಆದರೂ ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಏಜೆಂಟರಂತೆ ವರ್ತಿಸಿದ್ದಾರೆ’ ಎಂದು ಆರೋಪಿಸಿದರು.

‘ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುಮ್ಮಕ್ಕಿನಿಂದ ಇಂತಹ ಘಟನೆ ನಡೆದಿದೆ. ಕಲಬುರಗಿಯಲ್ಲಿ ಪೊಲೀಸ್ ತುರ್ತು ಪರಿಸ್ಥಿತಿಯಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದೆ. ಕೂಡಲೇ ಸಚಿವ ಸಂಪುಟದಿಂದ ಪ್ರಿಯಾಂಕ್ ಅವರನ್ನು ವಜಾ ಮಾಡಬೇಕು’ ಎಂದು ಆಗ್ರಹಿಸಿದರು.

ಮಾಜಿ ಶಾಸಕ ಸುನಿಲ ಹೆಗಡೆ ಮಾತನಾಡಿ, ‘ಕಾಂಗ್ರೆಸ್ನವರು ಚುನಾವಣಾ ಸಂದರ್ಭದಲ್ಲಿ ಸಂವಿಧಾನ ಪುಸ್ತಕ ತೋರಿಸಿ ಚುನಾವಣೆ ಪ್ರಚಾರ ಮಾಡಿದರು. ಈಗ ಈ ರೀತಿ ಗೂಂಡಾ ವರ್ತನೆಯಿಂದ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಜನಪ್ರತಿನಿಧಿಗೇ ಪೊಲೀಸರು ರಕ್ಷಣೆ ನೀಡಲಾಗದಿದ್ದರೆ ಜನರನ್ನು ಯಾವ ರೀತಿ ರಕ್ಷಿಸಬಲ್ಲರು’ ಎಂದು ಆಕ್ರೋಶ ಹೊರಹಾಕಿದರು.

ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯಕ, ಮುಖಂಡ ವಿಠ್ಠಲ ಸಿದ್ದನ್ನವರ, ಮಂಗೇಶ ದೇಶಪಾಂಡೆ, ಸೋನಪ್ಪಾ ಸುನಕಾರ, ಹನುಮಂತ ಚಿನಗಿ, ಚೂಡಪ್ಪಾ ಬೊಬಾಟಿ, ಶಂಕರ ಪಟ್ಟೇಕರ, ಶಿವಾಜಿ ನರಸಾನಿ, ಸಂತೋಷ ಘಟಕಾಂಬಳೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.