ಕಾರವಾರ: ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಸೌಕರ್ಯಗಳ ಆಸ್ಪತ್ರೆ ಆರಂಭಿಸುವಂತೆ ಒತ್ತಾಯಿಸಿ, ಸಾಮಾಜಿಕ ಜಾಲತಾಣಗಳ ಬಳಕೆದಾರರು ಭಾನುವಾರ ಆರಂಭಿಸಿದ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾನುವಾರ ಟ್ವಿಟರ್‌ನಲ್ಲಿ ಈ ವಿಷಯವು ದೇಶದ ಮಟ್ಟಿಗೆ ಅತಿ ಹೆಚ್ಚು ಚರ್ಚಿತ 35ನೇ ವಿಷಯವಾಗಿತ್ತು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವೀಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಟ್ಯಾಗ್ ಮಾಡಿ ಸಂಜೆ 5 ಗಂಟೆಗೆ ಟ್ವೀಟ್ ಮಾಡಲಾಗಿತ್ತು. ರಾತ್ರಿ 8ರವರೆಗೆ 14 ಸಾವಿರ ಟ್ವೀಟ್‌ಗಳು ಪ್ರಕಟವಾಗಿದ್ದವು ಎಂದು ಟ್ವಿಟರ್‌ನ ಅಂಕಿ ಅಂಶಗಳು ತಿಳಿಸಿವೆ.

ವಿಧಾನಸಭೆ ಪ್ರತಿಪ್ರಕ್ಷದ ನಾಯಕ ಸಿದ್ದರಾಮಯ್ಯ ಕೂಡ ಉತ್ತರ ಕನ್ನಡದಲ್ಲಿ ಸುಸಜ್ಜಿತ ಆಸ್ಪತ್ರೆಯ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಅವರೂ ಟ್ವೀಟ್ ಮತ್ತು ಫೇಸ್‌ಬುಕ್‌ನಲ್ಲಿ ‘ಪೋಸ್ಟ್’ ಮಾಡಿದ್ದಾರೆ.

‘ಸುಸಜ್ಜಿತ ತುರ್ತು ಚಿಕಿತ್ಸಾ ವ್ಯವಸ್ಥೆಗೆ ಆಗ್ರಹಿಸಿ ಉತ್ತರ ಕನ್ನಡದ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಅಹವಾಲನ್ನು ಮುಕ್ತ ಮನಸಿನಿಂದ ಆಲಿಸಿ, ಸಮಸ್ಯೆ ಬಗೆಹರಿಸುವತ್ತ ಕಾರ್ಯಪ್ರವೃತ್ತವಾಗಬೇಕು ಎಂದು ಒತ್ತಾಯಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಚಲನಚಿತ್ರ ನಿರ್ದೇಶಕರು, ಸಾಮಾಜಿಕ ಕಾರ್ಯಕರ್ತರು, ರಾಜಕಾರಣಿಗಳು, ವಿವಿಧ ಸಂಘ ಸಂಸ್ಥೆಗಳು ಜಿಲ್ಲೆಯ ಬೇಡಿಕೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.