‘ಹತ್ತು ವರ್ಷಕ್ಕಿಂತಲೂ ಹೆಚ್ಚು ಅವಧಿಯಿಂದ ಭಟ್ಕಳದಲ್ಲೇ ಬೀಡುಬಿಟ್ಟಿರುವ ನೌಕರರನ್ನು ವರ್ಗಾಯಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಉಪವಿಭಾಗಾಧಿಕಾರಿಗೆ ದೂರು ನೀಡಿದ್ದರೂ ಕ್ರಮವಾಗಿಲ್ಲ. ವರ್ಗಾವಣೆ ಮಾಡದಿದ್ದರೆ ಸೆಪ್ಟೆಂಬರ್ 26 ರಿಂದ ಭಟ್ಕಳದ ಆಡಳಿತ ಸೌಧದ ಎದುರು ಅಹೋರಾತ್ರಿ ಧರಣಿ ನಡೆಸಲಾಗುವುದು’ ಎಂದು ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಭಟ್ಕಳ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರ ನಾಯ್ಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.