ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ: ಆರ್.ವಿ.ದೇಶಪಾಂಡೆ

Published : 14 ಸೆಪ್ಟೆಂಬರ್ 2024, 14:25 IST
Last Updated : 14 ಸೆಪ್ಟೆಂಬರ್ 2024, 14:25 IST
ಫಾಲೋ ಮಾಡಿ
Comments

ಶಿರಸಿ: ‘ನಾಗಮಂಗಲದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣ ಖಂಡನೀಯ. ಸರ್ಕಾರ ಪಾರದರ್ಶಕ ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿದೆ’ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗಣೇಶ ಮೂರ್ತಿ ಮೆರವಣಿಗೆ ನಡೆದಾಗ ಎಲ್ಲರೂ ಸಹಕರಿಸಬೇಕು. ಈ ಘಟನೆ ಮನಸ್ಸಿಗೆ ನೋವು ತಂದಿದೆ. ಇಂಥ ಘಟನೆಗಳು ಆಗಬಾರದು‌. ಸರ್ಕಾರ ಇದರ ಬಗ್ಗೆ ಕ್ರಮ ಕೈಗೊಳ್ಳುತ್ತಿದೆ. ಪಾರದರ್ಶಕವಾಗಿ ಕ್ರಮ ಕೈಗೊಳ್ಳುತ್ತದೆ’ ಎಂದರು. 

‘ಸಿ.ಎಂ ಸಿದ್ದರಾಮಯ್ಯ ನಾಯಕತ್ವದಲ್ಲಿ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಸಿದ್ದರಾಮಯ್ಯ ಅನುಭವಿ ಹಾಗೂ ಒಳ್ಳೆಯ ನಾಯಕ. ಎಲ್ಲರೂ ಅವರಿಗೆ ಸಹಕರಿಸಬೇಕು. ಸಿದ್ದರಾಮಯ್ಯ ಈಗಾಗಲೇ ಇದ್ದಾಗ ನನ್ನ ಮುಖ್ಯಮಂತ್ರಿ ಮಾಡೋ ಪ್ರಶ್ನೆ ಉದ್ಭವಿಸಲ್ಲ‌. ಅರ್ಹತೆ ಪ್ರಶ್ನೆ ಬೇರೆ. ನಾವು ಪಕ್ಷದ ಶಿಸ್ತಿನ ಸಿಪಾಯಿಗಳಾಗಬೇಕು. ಸರ್ಕಾರ ಇಷ್ಟು ಚೆನ್ನಾಗಿ ನಡೆಯುತ್ತಿರುವಾಗ ಬೇರೆ ಯಾರು ಕೂಡ ಇದರ ಬಗ್ಗೆ ಬೇರೆ ವಿಚಾರ ಮಾಡಬಾರದು’ ಎಂದು ಹೇಳಿದರು. 

ಈ ವೇಳೆ ಶಾಸಕ ಭೀಮಣ್ಣ ನಾಯ್ಕ, ಪ್ರಮುಖರಾದ ನಾಗರಾಜ ನಾರ್ವೇಕರ, ರಮೇಶ ದುಭಾಶಿ, ದೀಪಕ ದೊಡ್ಡುರು ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT