ಹಳಿಯಾಳ: ‘ದೇಶದ ಅಭಿವೃದ್ಧಿಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕಾರ್ಯ ನಿರ್ವಹಿಸಿದ ಮಹಾನ್ ನಾಯಕ ಡಿ. ದೇವರಾಜ ಅರಸು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಪರಶುರಾಮ ಘಸ್ತೆ ಹೇಳಿದರು.

ಮಂಗಳವಾರ ಇಲ್ಲಿಯ ತಾಲ್ಲೂಕು ಆಡಳಿತ, ಹಿಂದುಳಿದ ಕಲ್ಯಾಣ ಇಲಾಖೆ, ನಗರಸಭೆ, ಪುರಸಭೆ ವತಿಯಿಂದ ಇಲ್ಲಿಯ ದೇವರಾಜ ಅರಸು ಭವನದಲ್ಲಿ ನಡೆದ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಜೀತ ಪದ್ಧತಿ ನಿರ್ಮೂಲನೆ, ಭೂಸುಧಾರಣೆ ಕಾಯ್ದೆ ಮತ್ತಿತರ ಅಭಿವೃದ್ಧಿಪರ ಕಾರ್ಯ ಮಾಡಿದವರು ದೇವರಾಜ ಅರಸು ಅವರು‘ ಎಂದು ಹೇಳಿದರು.

ಧಾರವಾಡದ ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥ ಮೇಟಿ ರುದ್ರೇಶ್ ಮಾತನಾಡಿ, ‘ದೇವರಾಜ್ ಅರಸು ಅವರು ಸಮಾನತೆಗಾಗಿ ಹೋರಾಡಿದವರು. ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿದವರು. ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿದ್ದರು’ ಎಂದರು.

ದಾಂಡೇಲಿ ನಗರಸಭೆ ಅಧ್ಯಕ್ಷ ಅಷ್ಫಾಕ್ ಶೇಖ್ ಮಾತನಾಡಿದರು.

ಪುರಸಭೆ ಅಧ್ಯಕ್ಷೆ ದ್ರೌಪದಿ ಅಗಸರ, ಉಪಾಧ್ಯಕ್ಷೆ ಲಕ್ಷ್ಮಿ ವಡ್ಡರ, ದಾಂಡೇಲಿಯ ಯಾಸ್ಮಿನ್ ಕಿತ್ತೂರ್, ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಜಿ.ಡಿ. ಗಂಗಾಧರ, ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಬಸವರಾಜ ದಳವಾಯಿ, ಬಸವ ಕೇಂದ್ರದ ಬಸವರಾಜ ಗಾಣಿಗೇರ, ತಾಲ್ಲೂಕು ಆರೋಗ್ಯ ಸಹಾಯಕ ಅಧಿಕಾರಿ ಆನಂದ್ ಬಡಿಗೇರ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಸುಜಾತ ಖಡತರೆ, ವಿಸ್ತಾರಣಾ ಅಧಿಕಾರಿ ವಾಣಿ ಹೊಸಮನಿ ಇದ್ದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.