ಹಳಿಯಾಳ: ‘ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ಜನರು ತತ್ತರಿಸುತ್ತಿದ್ದಾರೆ. ವಿದ್ಯಾವಂತ ಯುವಕರು ಉದ್ಯೋಗಕ್ಕಾಗಿ ಅಲೆದಾಡುತ್ತಿದ್ದಾರೆ. ಜನರಿಗೆ ನ್ಯಾಯ ಬದ್ಧವಾಗಿ ಉತ್ತಮ ಆಡಳಿತ ನೀಡಲು ಕೇಂದ್ರದಲ್ಲಿ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಕೂಡಿ ಆಡಳಿತಕ್ಕೆ ಬರಬೇಕಾಗಿದೆ’ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜನ್ಮ ದಿನದ ಅಂಗವಾಗಿ ಇಲ್ಲಿನ ತಾಲ್ಲಾಕಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಿಸಿ ಗುರುವಾರ ಮಾತನಾಡಿದ ಅವರು, ‘ರಾಹುಲ್ ಗಾಂಧಿಯವರಿಗೆ ಪ್ರಧಾನಿಯಾಗುವ ಎಲ್ಲಾ ಅರ್ಹತೆ ಇದೆ. ದೇಶದಲ್ಲಿ ಶಾಂತಿ, ನೆಮ್ಮದಿ, ಸರ್ವಾಂಗೀಣ ಅಭಿವೃದ್ಧಿ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷದಿಂದ ಮಾತ್ರ ಸಾಧ್ಯ’ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪಾಟೀಲ ಪುರಸಭೆ ಅಧ್ಯಕ್ಷೆ ದ್ರೌಪದಿ ಅಗಸರ, ಮುಖಂಡರು ಪಾಲ್ಗೊಂಡಿದ್ದರು.

ಶಾಸಕ ಆರ್.ವಿ ದೇಶಪಾಂಡೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಪರ ಜಯ ಘೋಷ ಕೂಗುತ್ತಾ ಮೆರವಣಿಗೆ ಮೂಲಕ ತಾಲ್ಲೂಕಾ ಆಸ್ಪತ್ರೆಗೆ ಬಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.