ಶಿರಸಿ: ‘ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ, ಅರೆಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳು ಕೈಗೊಳ್ಳುವ ಕಾಮಗಾರಿಗಳ ಮಾಹಿತಿಯನ್ನು ಕಡ್ಡಾಯವಾಗಿ ದಾಖಲಿಸಿಟ್ಟುಕೊಂಡಿರಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ ಸೂಚನೆ ನೀಡಿದರು.

ನಗರದ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ‘ವಿವಿಧ ಯೋಜನೆಗಳಡಿ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಯಾವುದೇ ನೆಪ ಹೇಳದೆ ಪ್ರಗತಿ ಸಾಧಿಸಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಮಾಹಿತಿ ಇದ್ದಾಗಲೇ ಅಭಿವೃದ್ಧಿಯ ಕುರಿತು ಬೇರೆಯವರಿಗೆ ಮಾಹಿತಿ ನೀಡಲು ಸಾಧ್ಯ’ ಎಂದರು.

‘ಅನಿರ್ಬಂಧಿತ ಕಾಮಗಾರಿಯ ಪ್ರಗತಿ ಹಾಗೂ ಖರ್ಚು ವೆಚ್ಚಗಳಲ್ಲಿ ವ್ಯತ್ಯಾಸವಾಗದಂತೆ ಕ್ರಮ ವಹಿಸಬೇಕು. ವಾರ್ಷಿಕ ಲೆಕ್ಕಪತ್ರ ಹಾಗೂ ಆಯವ್ಯಯ ಸಲ್ಲಿಸದೆ ಇರುವವರ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ ಎಂಬ ಕುರಿತು ಜಿಲ್ಲಾ ಪಂಚಾಯಿತಿಗೆ ವರದಿ ಸಲ್ಲಿಸಬೇಕು. ವಸತಿ ಯೋಜನೆಯಡಿ ಪ್ರಗತಿಯಲ್ಲಿರುವ ವಸತಿ ಮನೆಗಳ ಕಾಮಗಾರಿಯನ್ನು ನವೆಂಬರ್ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು. ಈವರೆಗೆ ತಾಂತ್ರಿಕ ಮಂಜೂರಾತಿ ಬಾಕಿ ಇರುವ ಗ್ರಾಮ ಪಂಚಾಯಿತಿಗಳು 10 ದಿನಗಳೊಳಗಾಗಿ ಪ್ರಗತಿ ಸಾಧಿಸಿ ಮಾಹಿತಿ ನೀಡಬೇಕು’ ಎಂದು ಸೂಚಿಸಿದರು.

‘ಕಸ ವಿಲೇವಾರಿ ವ್ಯವಸ್ಥಿತವಾಗಿದೆಯೇ ಎಂಬುದನ್ನು ದಿನದಲ್ಲಿ ಒಮ್ಮೆಯಾದರೂ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಗ್ರಾಮ ಪಂಚಾಯಿತಿಗಳು ಸ್ವಚ್ಛ ವಾಹಿನಿಯ ಬಳಕೆದಾರರ ಶುಲ್ಕ ಸಂಗ್ರಹಣೆ ಮಾಡಿ ಅದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದ ಅವರು, ‘ನರೇಗಾ ಯೋಜನೆಯಡಿ ಮಾನವ ದಿನ ಸೃಜನೆಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಬೇಕು. ಯಾವ ದೋಷದಿಂದ ಕಾಮಗಾರಿ ಮುಕ್ತಾಯವಾಗಿಲ್ಲ ಎಂಬುದರ ಕುರಿತು ಸಮಂಜಸವಾದ ಮಾಹಿತಿಯ ವರದಿಯನ್ನು ಜಿಲ್ಲಾ ಪಂಚಾಯಿತಿ ಸಲ್ಲಿಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಆಡಳಿತ ವಿಭಾಗದ ಉಪ ಕಾರ್ಯದರ್ಶಿ ಎಂ.ಎಸ್. ಅಲ್ಲಾಭಕ್ಷ, ಯೋಜನಾ ನಿರ್ದೇಶಕ ಕರೀಂ ಅಸಾದಿ, ಅಭಿವೃದ್ಧಿ ವಿಭಾಗದ ಉಪಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತ, ಮುಖ್ಯ ಲೆಕ್ಕಾಧಿಕಾರಿ ಆನಂದ ಹಬೀಬ್, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಬಿ.ಪಿ. ಸತೀಶ, ಇಒ ಚನ್ನಬಸಪ್ಪ ಹಾವಣಗಿ ಇದ್ದರು.

ಎಲ್ಲ ಯೋಜನೆಗಳು ಹಾಗೂ ಅಭಿವೃದ್ಧಿ ಅನುದಾನದ ಕುರಿತು ದಾಖಲೆಗಳ ನಿರ್ವಹಣೆ ಹಾಗೂ ಲೆಕ್ಕಪತ್ರಗಳ ನಿರ್ವಹಣೆ ಸರಿಯಾಗಿರಬೇಕು
ಡಾ.ದಿಲೀಷ್ ಶಶಿ ಜಿಲ್ಲಾ ಪಂಚಾಯಿತಿ ಸಿಇಒ

ಪಂಚಾಯಿತಿ ಅನುದಾನದಲ್ಲಿ ಸಹಾಯಧನ

‘ಕೂಸಿನ ಮನೆಯ ಸಂಪೂರ್ಣ ಸದುಪಯೋಗಕ್ಕಾಗಿ ಕೂಲಿಕಾರರ ಮಕ್ಕಳಿಗೆ ಅನುಕೂಲ ಕಲ್ಪಿಸಬೇಕು. ಕೇರ್ ಟೇಕರ್ಗಳಿಗೆ ಗ್ರಾಮ ಪಂಚಾಯಿತಿಗಳಲ್ಲಿ ಲಭ್ಯವಿರುವ ಅನುದಾನದಡಿ ಸಹಾಯಧನ ಪಾವತಿ ಮಾಡಬೇಕು. ನಲ್ಜಲ್ ಮಿತ್ರ ತರಬೇತಿ ವೆಚ್ಚವನ್ನು ಪಾವತಿಸದಿರುವ ಗ್ರಾಮ ಪಂಚಾಯಿತಿಗಳ ಬ್ಯಾಂಕ್ ಖಾತೆ ಪರಿಶೀಲಿಸಿ ಪಾವತಿಯಾಗುವಂತೆ ಕ್ರಮ ವಹಿಸಬೇಕು’ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.