ಕಾರವಾರ: 'ಉತ್ತರ ಕನ್ನಡ ಸೇರಿದಂತೆ ಭೂಕುಸಿತ, ಕಡಲು ಕೊರೆತ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಗಳಲ್ಲಿ ತುರ್ತು ಕಾಮಗಾರಿ ಕೈಗೊಳ್ಳಲು ₹800 ಕೋಟಿ ಅನುದಾನಕ್ಕೆ ಶೀಘ್ರವೇ ಅನುಮೋದನೆ ನೀಡಲಾಗುವುದು' ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

'6 ಜಿಲ್ಲೆಗಳಲ್ಲಿ ಭೂಕುಸಿತ ಸಮಸ್ಯೆ ತೀವ್ರವಾಗಿದ್ದು, ತಡೆಗೋಡೆ ನಿರ್ಮಿಸುವ ಕೆಲಸ ನಡೆಯಬೇಕಿದೆ. ಇದಕ್ಕಾಗಿ ₹500 ಕೋಟಿ ಮೀಸಲಿಡಲಾಗುತ್ತಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಡಲು ಕೊರೆತ ಸಮಸ್ಯೆ ತಡೆಗೆ ₹300 ಕೋಟಿ ಒದಗಿಸಲಾಗುವುದು' ಎಂದು ಹೇಳಿದರು.

'ತಡೆಗೋಡೆ ನಿರ್ಮಾಣ ಸೇರಿದಂತೆ ಪ್ರಕೃತಿ ವಿಕೋಪ ತಡೆಗೆ ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆಯಾಗಲು ವಿಳಂಬವಾಗಿದೆ. ಈಗಾಗಲೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ' ಎಂದರು.

'ರಾಜ್ಯದ ಸುಮಾರು 1,500 ಸ್ಥಳಗಳಲ್ಲಿ ಮಳೆ ಮಾಪನ ಕೇಂದ್ರಗಳು ದುಸ್ಥಿತಿಯಲ್ಲಿವೆ. ಅವುಗಳನ್ನು ದುರಸ್ತಿ ಮಾಡಿಸುವ ಕೆಲಸ ನಡೆಯಲಿದೆ. ಯಂತ್ರಗಳು ಸಂಪೂರ್ಣ ಹಾಳಾಗಿದ್ದರೆ ಹೊಸ ಯಂತ್ರಗಳ ಅಳವಡಿಕೆ ನಡೆಯಲಿದೆ' ಎಂದರು.

'ಕಂದಾಯ ದಾಖಲೆಗಳನ್ನು ಗಣಕೀಕರಣ ಮಾಡಲಾಗುತ್ತಿದೆ. ಜನರಿಗೆ ದಾಖಲೆಗಳು ಸುಲಭವಾಗಿ ಸಿಗುವಂತೆ ಮಾಡಲಾಗುತ್ತಿದೆ. ಮುಂದಿನ 6 ತಿಂಗಳ ಒಳಗೆ ಎಲ್ಲ ಕಂದಾಯ ದಾಖಲೆಗಳನ್ನು ಗಣಕೀಕರಣ ಮಾಡುವ ಗುರಿ ಹೊಂದಿದ್ದೇವೆ' ಎಂದು ಕುಮಟಾದ ತಹಶೀಲ್ದಾರ್ ಕಚೇರಿಯಲ್ಲಿ ಗಣಕೀಕರಣ ಪ್ರಕ್ರಿಯೆ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಶಿರಸಿ ತಾಲ್ಲೂಕಿನ ಬೆಣ್ಣೆಹೊಳೆ ಸೇತುವೆ, ಭೂಕುಸಿತ ಸಂಭವಿಸಿರುವ ಕುಮಟಾ ತಾಲ್ಲೂಕಿನ ದೇವಿಮನೆ ಘಟ್ಟ ಪ್ರದೇಶದಲ್ಲಿ ಪರಿಶೀಲನೆ ನಡೆಸಿದರು. ದೇವಿಮನೆ ಘಟ್ಟದಲ್ಲಿ ತಡೆಗೋಡೆ ನಿರ್ಮಿಸದೆ ಹೆದ್ದಾರಿ ಕಾಮಗಾರಿ ಕೈಗೆತ್ತಿಕೊಂಡಿದ್ದಕ್ಕೆ ಆರ್.ಎನ್.ಎಸ್ ಇನ್ಫ್ರಾಸ್ಟ್ರಕ್ಚರ್ ಕಂಪನಿ ಅಧಿಕಾರಿಗಳನ್ನು ತರಾಟೆಗೆ ಪಡೆದರು.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕರಾದ ಭೀಮಣ್ಣ ನಾಯ್ಕ, ದಿನಕರ ಶೆಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.