ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಣೆ: ಶಾಸಕ ಆರ್.ವಿ. ದೇಶಪಾಂಡೆ

Published 13 ಮೇ 2024, 13:47 IST
Last Updated 13 ಮೇ 2024, 13:47 IST
ಅಕ್ಷರ ಗಾತ್ರ

ಹಳಿಯಾಳ: ‘ರಾಜ್ಯದಲ್ಲಿ ಕಳೆದ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾದ ಬೆಳೆ ನಷ್ಟಕ್ಕಾಗಿ ರೈತರಿಗೆ ಪರಿಹಾರ ವಿತರಣೆ ಪ್ರಕ್ರಿಯೆ ಆರಂಭವಾಗಿದೆ’ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಸ್‌.ಡಿ.ಆರ್‌.ಎಫ್‌ (ರಾಜ್ಯ ವಿಪತ್ತು ನಿರ್ವಹಣಾ ನಿಧಿ) ಮಾರ್ಗಸೂಚಿ ಅನ್ವಯ ರಾಜ್ಯ ಸರ್ಕಾರವು ಸಣ್ಣ ಮತ್ತು ಅತಿ ಸಣ್ಣ ಬೇಸಾಯ ಮಾಡುವ ಕುಟುಂಬಗಳಿಗೆ ಆಗಿರುವ ಜೀವನೋಪಾಯದ ನಷ್ಟಗಳಿಗೆ ತಾತ್ಕಾಲಿಕವಾಗಿ ಬರ ಪರಿಹಾರ ಹಣವನ್ನು ಅವರ ಖಾತೆಗಳಿಗೆ ನೇರವಾಗಿ ವರ್ಗಾಯಿಸಿದೆ’ ಎಂದು ತಿಳಿಸಿದ್ದಾರೆ.

‘ಇವುಗಳಲ್ಲಿ ಹಳಿಯಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ₹1652.30 ಲಕ್ಷ ಬೆಳೆ ಪರಿಹಾರ  ಹಂಚಿಕೆ ಮಾಡಲಾಗಿದ್ದು, ಹಳಿಯಾಳ ತಾಲ್ಲೂಕಿಗೆ ₹1462.44 ಲಕ್ಷ, ದಾಂಡೇಲಿ ತಾಲ್ಲೂಕಿಗೆ ₹58.88 ಲಕ್ಷ ಹಾಗೂ ಜೊಯಿಡಾ ತಾಲ್ಲೂಕಿಗೆ 130.98 ಲಕ್ಷ ಬೆಳೆ ಪರಿಹಾರ ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT