ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರ | ಇಂದಿರಾ ಕ್ಯಾಂಟಿನ್‌ನಲ್ಲಿ ಉಪಹಾರ ಸವಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

Published 9 ಡಿಸೆಂಬರ್ 2023, 7:16 IST
Last Updated 9 ಡಿಸೆಂಬರ್ 2023, 7:16 IST
ಅಕ್ಷರ ಗಾತ್ರ

ಕಾರವಾರ: ಇಲ್ಲಿನ ಗಾಂಧಿ ನಗರದಲ್ಲಿರುವ ಇಂದಿರಾ ಕ್ಯಾಂಟಿನ್‌ಗೆ ಶನಿವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಬೆಳಗಿನ ಉಪಹಾರವಾಗಿ ಮಸಾಲಾ ರೈಸ್ ಸವಿದರು.

ಕ್ಯಾಂಟಿನ್‌ನಲ್ಲಿ ಶುಚಿ ಮತ್ತು ರುಚಿಗೆ ಹೆಚ್ಚಿನ ಆದ್ಯತೆ ನೀಡುವಂತೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿ, ಕ್ಯಾಂಟಿನ್ ಉಪಯೋಗಕ್ಕೆ ನೀಡಿರುವ ಫ್ರಿಡ್ಜ್ ಮತ್ತಿತರ ಯಂತ್ರೋಪಕರಣಗಳನ್ನು ವ್ಯವಸ್ಥಿತವಾಗಿ ಬಳಸುವಂತೆ ಹಾಗೂ ಶುದ್ದ ಕುಡಿಯುವ ನೀರನ್ನು ಗ್ರಾಹಕರಿಗೆ ಒದಗಿಸುವಂತೆ ಸೂಚನೆ ನೀಡಿದರು.

'ಪ್ರತಿ ದಿನದ ಮೆನುವಿನ ಪ್ರಕಾರವೇ ಆಹಾರ ತಯಾರಿಸಿ, ಗ್ರಾಹಕರಿಗೆ ವಿತರಿಸಬೇಕು. ಮೆನುವಿನಲ್ಲಿ ಬದಲಾವಣೆ ಇರಕೂಡದು' ಎಂದು ಕ್ಯಾಂಟಿನ್ ಸಿಬ್ಬಂದಿಗೆ ಎಚ್ಚರಿಸಿದರು.

ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗೀಸ್, ನಗರಸಭೆ ಪೌರಾಯುಕ್ತ ಕೆ.ಚಂದ್ರಮೌಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT