ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರ: ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಸಿಯೂಟ ಸವಿದ ಜಿಲ್ಲಾಧಿಕಾರಿ

Published 19 ಫೆಬ್ರುವರಿ 2024, 10:57 IST
Last Updated 19 ಫೆಬ್ರುವರಿ 2024, 10:57 IST
ಅಕ್ಷರ ಗಾತ್ರ

ಕಾರವಾರ: ತಾಲ್ಲೂಕಿನ ಶಿರವಾಡದ ಸರ್ಕಾರಿ ಪ್ರೌಢಶಾಲೆಗೆ ಸೋಮವಾರ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟ ಪರಿಶೀಲಿಸಲು ತಾವೇ ವಿದ್ಯಾರ್ಥಿಗಳೊಂದಿಗೆ ಕುಳಿತು ಊಟ ಸವಿದರು.

ಆಗಾಗ ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸುವ ಜಿಲ್ಲಾಧಿಕಾರಿ ಶಿರವಾಡದ ಶಾಲೆಗೆ ಊಟದ ಸಮಯದಲ್ಲೇ ತೆರಳಿ ಪರಿಶೀಲಿಸಿದರು. ವಿದ್ಯಾರ್ಥಿನಿಯರೊಂದಿಗೆ ಶಾಲೆಯಲ್ಲಿರುವ ವ್ಯವಸ್ಥೆಗಳ ಕುರಿತು ಚರ್ಚಿಸಿದರು. ವಿದ್ಯಾರ್ಥಿನಿಯರ ಪಂಕ್ತಿಯಲ್ಲೇ ಕುಳಿತು ಅವರೊಟ್ಟಿಗೆ ಊಟ ಸವಿದರು. ಡಿಡಿಪಿಐ ಲತಾ ನಾಯಕ ಕೂಡ ಜತೆಗಿದ್ದರು.

‘ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡುವಂತೆ ಕ್ರಮವಹಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗುತ್ತಿತ್ತು. ಸರಿಯಾದ ಆಹಾರ ನೀಡುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಖುದ್ದು ಪರಿಶೀಲನೆ ನಡೆಸಲಾಯಿತು. ಆಹಾರದಲ್ಲಿ ಇನ್ನಷ್ಟು ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ ನೀಡಲಾಗಿದೆ’ ಎಂದು ಗಂಗೂಬಾಯಿ ಮಾನಕರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT