ಹೊನ್ನಾವರ (ಉತ್ತರ ಕನ್ನಡ ಜಿಲ್ಲೆ): ತಾಲ್ಲೂಕಿನ ಕಾಸರಕೋಡ ಟೊಂಕ ಸಮೀಪ ಸಮುದ್ರ ತೀರದಲ್ಲಿ ಶುಕ್ರವಾರ ಡಾಲ್ಫಿನ್ ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
‘ಡಾಲ್ಫಿನ್ ಸಾವಿಗೆ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ನಿಖರ ಕಾರಣ ಗೊತ್ತಾಗಲಿದೆ’ ಎಂದು ವಲಯ ಅರಣ್ಯಾಧಿಕಾರಿ ಸವಿತಾ ದೇವಾಡಿಗ ತಿಳಿಸಿದರು.
‘ಕಾಸರಕೋಡ ಸಮೀಪದ ಕಡಲು ಡಾಲ್ಫಿನ್ ವಾಸಸ್ಥಾನವಾಗಿದ್ದು, ಅಳಿವಿನಂಚಿನಲ್ಲಿರುವ ಅವುಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳಬೇಕಿದೆ' ಎಂದು ಮೀನುಗಾರ ಮುಖಂಡ ರಾಜೇಶ ತಾಂಡೇಲ ಹೇಳಿದರು.