ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಫೈಬರ್ ತಯಾರಿಕಾ ಕಾರ್ಖಾನೆ ಭಸ್ಮ

Published 14 ಡಿಸೆಂಬರ್ 2023, 9:06 IST
Last Updated 14 ಡಿಸೆಂಬರ್ 2023, 9:06 IST
ಅಕ್ಷರ ಗಾತ್ರ

ಶಿರಸಿ: ಫೈಬರ್ ತಯಾರಿಸುವ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಹಾನಿಯಾದ ಘಟನೆ ತಾಲ್ಲೂಕಿನ ಕೊಳಗಿಬಿಸ್ ಬಳಿ ಗುರುವಾರ ನಡೆದಿದೆ.

ಇಲ್ಲಿನ ಮಶಿಗದ್ದೆಯ ರಾಘವ ವಿಶ್ವೇಶ್ವರ ಹೆಗಡೆ ಅವರಿಗೆ ಸೇರಿದ ಕಾರ್ಖಾನೆ ಬೆಂಕಿಗೆ ಆಹುತಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಕಾರ್ಖಾನೆಯಲ್ಲಿ ಪ್ಲಾಸ್ಟಿಕ್, ಫೈಬರ್ ವಸ್ತುಗಳು ಸಂಗ್ರಹವಿದ್ದು, ಬೆಂಕಿ ವ್ಯಾಪಕವಾಗಿ ಹರಡಲು ಕಾರಣವಾಗಿದೆ. ಕಾರ್ಖಾನೆಗೆ ತಾಗಿಕೊಂಡೇ ಅಡಿಕೆ ತೋಟವಿದ್ದು, ಅದಕ್ಕೂ ಬೆಂಕಿ ಆವರಿಸಿದೆ. ತೋಟ ಉಳಿಸಿಕೊಳ್ಳಲು ಗ್ರಾಮಸ್ಥರ ಪರದಾಡುತ್ತಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು, ಬೆಂಕಿ ಆರಿಸಲು ಹರಸಾಹಸ ಪಡುತ್ತಿದ್ದಾರೆ. ಗ್ರಾಮಸ್ಥರು ಕೂಡ ಬೆಂಕಿ ನಂದಿಸಲು ಸಹಕಾರ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT