ಶಿರಸಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ದಿಸೆಯಲ್ಲಿ ಶ್ರಮಿಸುತ್ತಿರುವ ಸರ್ಕಾರವು ಕಳೆದ ವರ್ಷದಿಂದ ಇಂಗ್ಲಿಷ್ ಮಾಧ್ಯಮದ ಮೊರೆ ಹೋಗಿದ್ದು, ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ 20 ಇಂಗ್ಲಿಷ್ ಮಾಧ್ಯಮ (ಪೂರ್ವ ಪ್ರಾಥಮಿಕ) ಶಾಲೆಗಳಿಗೆ ಮಂಜೂರಾತಿ ನೀಡಿತ್ತು. ಇದರಿಂದ ದಾಖಲಾತಿಯಲ್ಲಿ ಪ್ರಗತಿ ಕಂಡ ಕಾರಣಕ್ಕೆ ಈ ವರ್ಷ ಮತ್ತೆ ಹೊಸ ಶಾಲೆಗಳಿಗೆ ಅನುಮತಿ ಕೋರಿ ಶಿಕ್ಷಣ ಇಲಾಖೆ ಪ್ರಸ್ತಾವ ಸಲ್ಲಿಸಿದೆ.

ಉಚಿತ ಶಿಕ್ಷಣದ ಜತೆ ಸಾಕಷ್ಟು ಸೌಲಭ್ಯ ಕಲ್ಪಿಸುತ್ತಿದ್ದರೂ ಇಂಗ್ಲಿಷ್ ವ್ಯಾಮೋಹದಿಂದ ಪಾಲಕರು ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುತ್ತಿದ್ದಾರೆ. ಪರಿಣಾಮ ಸಾಕಷ್ಟು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಕುಸಿಯುತ್ತಿದೆ. ಇದು ಭವಿಷ್ಯದಲ್ಲಿ ಈ ಶಾಲೆಗಳ ಬಾಗಿಲು ಮುಚ್ಚುವ ಆತಂಕ ಹೆಚ್ಚಿಸಿದೆ. ಹೀಗಾಗಿ ಮಕ್ಕಳ ಸಂಖ್ಯೆ ಹೆಚ್ಚಿಸಿ, ಸರ್ಕಾರಿ ಶಾಲೆಗಳನ್ನು ಉಳಿಸಲು ಶಾಲಾ ಮತ್ತು ಸಾಕ್ಷರತಾ ಇಲಾಖೆ ಇಂಗ್ಲಿಷ್ ಮಾಧ್ಯಮ ಶಾಲೆ ಪ್ರಾರಂಭಿಸುವ ದಾರಿ ಕಂಡುಕೊಂಡಿದೆ. ಈ ಮೂಲಕ ಖಾಸಗಿ ಶಾಲೆಗಳಿಗೆ ಸಡ್ಡು ಹೊಡೆಯಲು ಹೆಜ್ಜೆಯಿಟ್ಟಿದೆ.

‘ಕಳೆದ ಶೈಕ್ಷಣಿಕ ವರ್ಷದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ 20 ಕಡೆ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿತ್ತು. ಕೆಲವೆಡೆ ತಾಂತ್ರಿಕ ಕಾರಣಕ್ಕೆ ಹಿನ್ನಡೆಯಾದರೂ 15 ಶಾಲೆಗಳಲ್ಲಿ ತರಗತಿಗಳು ಆರಂಭ ಕಂಡಿದ್ದವು. ಅಂದಾಜು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಶಾಲೆಗಳಲ್ಲಿ ದಾಖಲಾತಿ ಪಡೆದಿದ್ದಾರೆ. ಪ್ರಸಕ್ತ ವರ್ಷ ಈವರೆಗೆ 5 ಶಾಲೆಗಳ ಬೇಡಿಕೆ ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಬಂದಿದೆ. ಬೇಡಿಕೆ ಇನ್ನಷ್ಟು ಹೆಚ್ಚುವ ಸಾಧ್ಯತೆಯೂ ಇದೆ. ಶೈಕ್ಷಣಿಕ ಜಿಲ್ಲಾ ಉಪನಿರ್ದೇಶಕರ ಕಚೇರಿಯಿಂದ ಹೆಚ್ಚುವರಿ ಶಾಲೆ ಬೇಡಿಕೆ ಮಂಜೂರಾತಿಗೆ ಸಂಬಂಧಿಸಿ ಪ್ರಸ್ತಾವ ಸಲ್ಲಿಸಲಾಗಿದೆ. ಇಂಗ್ಲಿಷ್ ಮಾಧ್ಯಮ ಆರಂಭದಿಂದ ಮಕ್ಕಳ ದಾಖಲಾತಿ ಹೆಚ್ಚುತ್ತಿರುವ ಕಾರಣ ಶಿಕ್ಷಣ ಇಲಾಖೆ ಅಧಿಕಾರಿಗಳು ಕೂಡ ಇಂಥ ಶಾಲೆಗಳ ಪ್ರಾರಂಭಕ್ಕೆ ಉತ್ಸಾಹ ತೋರುತ್ತಿದ್ದಾರೆ’ ಎಂಬುದು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳ ಮಾತು.

‘ಇಂಗ್ಲಿಷ್ ಮಾಧ್ಯಮ (ಪೂರ್ವ ಪ್ರಾಥಮಿಕ) ಪ್ರತಿ ತರಗತಿಗೆ 30 ಮಕ್ಕಳು ಪ್ರವೇಶ ಪಡೆಯಲು ಅವಕಾಶವಿದೆ. ಪ್ರವೇಶಕ್ಕೆ ಕನಿಷ್ಠ 3 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ತರಗತಿಗೆ ಒಬ್ಬ ಶಿಕ್ಷಕ ಅಥವಾ ಶಿಕ್ಷಕಿ ಮತ್ತು ಒಬ್ಬರು ಸಹಾಯಕಿಯನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಬೇಕು. ಪ್ರಸ್ತುತ ಅತಿಥಿ ಶಿಕ್ಷಕರ ಮಾದರಿಯಲ್ಲಿ ಈ ಶಿಕ್ಷಕರಿಗೂ ಸಂಭಾವನೆ ನಿಗದಿಪಡಿಸಲಾಗಿದೆ’ ಎನ್ನುತ್ತಾರೆ ಅವರು.

‘ಸರ್ಕಾರಿ ವ್ಯವಸ್ಥೆಯಲ್ಲಿ ಎಲ್ಲ ಸೌಲಭ್ಯ ಕಲ್ಪಿಸಿದರೂ ಇಂಗ್ಲಿಷ್ ಮಾಧ್ಯಮದ ಕೊರತೆ ವಿದ್ಯಾರ್ಥಿಗಳ ದಾಖಲಾತಿ ತಗ್ಗಲು ಕಾರಣವಾಗುತ್ತಿದೆ. ಹೀಗಾಗಿ ಹೆಚ್ಚಿನ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ (ಪೂರ್ವ ಪ್ರಾಥಮಿಕ) ಶಾಲೆ ಪ್ರಾರಂಭಿಸಿದರೆ ಈ ಸಮಸ್ಯೆ ನಿಶ್ಚಿತವಾಗಿ ನಿವಾರಣೆಯಾಗುತ್ತದೆ. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸುವ ಅಗತ್ಯವಿದೆ’ ಎಂಬುದು ಪಾಲಕರಾದ ಸುಮನಾ ಹೆಗಡೆ ಅಭಿಪ್ರಾಯ.

ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಹೊಸದಾಗಿ 5 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ (ಇಂಗ್ಲಿಷ್ ಮಾಧ್ಯಮ) ಆರಂಭಿಸಲು ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಪಾಲಕರಿಂದಲೂ ಸಾಕಷ್ಟು ಬೇಡಿಕೆ ವ್ಯಕ್ತವಾಗುತ್ತಿದೆ.
ಪಿ.ಬಸವರಾಜ್ ಡಿಡಿಪಿಐ ಶಿರಸಿ ಶೈಕ್ಷಣಿಕ ಜಿಲ್ಲೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.