ಕಾರವಾರ: ‘ಶಾಲೆಯಿಂದ ದೂರ ಉಳಿದ, ಶಿಕ್ಷಣ, ಇತರ ಸೌಲಭ್ಯಗಳಿಂದ ವಂಚಿತರಾದ ಮಕ್ಕಳ ಮಾಹಿತಿ ಸಂಗ್ರಹಿಸುವ ಕೆಲಸವಾಗಬೇಕು. ಮಕ್ಕಳು ಯಾವುದೇ ಮೂಲಭೂತ ಹಕ್ಕುಗಳಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ದಿವ್ಯಶ್ರೀ ಸಿ.ಎಂ ಹೇಳಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿರ್ದೇಶನದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮಕ್ಕಳ ಹಕ್ಕುಗಳನ್ನು ಅನುಷ್ಠಾನಗೊಳಿಸಲು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತ ವಿವಿಧ ಕಾಯ್ದೆಗಳ ಕುರಿತು ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಮಕ್ಕಳ ಮೇಲೆ ನಡೆಯುವ ಶೋಷಣೆಗಳನ್ನು ತಡೆಗಟ್ಟಲು ಮಕ್ಕಳ ಹಕ್ಕುಗಳ ರಕ್ಷಣಾ ಕಾಯ್ದೆಯನ್ನು ಕಡ್ಡಾಯವಾಗಿ ಅನುಷ್ಠಾನಕ್ಕೆ ತರುವುದು ಅಗತ್ಯವಿದೆ. ಪೋಕ್ಸೋ ಪ್ರಕರಣಗಳು ಹೆಚ್ಚುತ್ತಿವೆ. ಇಂತಹ ಹಲವು ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಕುರಿತು ಇಂತಹ ಕಾರ್ಯಗಾರಗಳ ಮೂಲಕ ಪರಿಹಾರಕಂಡುಕೊಳ್ಳಬೇಕಿದೆ’ ಎಂದರು.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶೈಕ್ಷಣಿಕ ಸಲಹೆಗಾರ್ತಿ ಅನುಬಾ ಜೈನ್ ಮಾತನಾಡಿ, ‘ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮಕ್ಕಳ ಹಕ್ಕುಗಳು, ಪೋಕ್ಸೋ ಕಾಯ್ದೆ, ಮಕ್ಕಳ ರಕ್ಷಣೆ, ಶಿಕ್ಷಣ, ಆರೋಗ್ಯದ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು. ಶಾಲಾ ಕಾಲೇಜುಗಳ ಮಟ್ಟದಲ್ಲಿ ರಕ್ಷಣೆ, ಆರೋಗ್ಯ ಕಾಳಜಿ ನಿಗಾ ವಹಿಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ ಮಾತನಾಡಿ, ‘ಸಮಾಜ ಅಭಿವೃದ್ಧಿಯಾಗಬೇಕಿದ್ದಲ್ಲಿ ಮಕ್ಕಳ ರಕ್ಷಣೆ ಮಾಡುವುದು ಅವಶ್ಯಕವಾಗಿದೆ’ ಎಂದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೃಷ್ಣಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿರೂಪಾಕ್ಷ ಪಾಟಿಲ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ, ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ಭಟ್, ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.