ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದಾಪುರ | ರೈತರ ಪ್ರತಿಭಟನೆಗೆ ತಡೆ; ಖಂಡನೆ

Published 17 ಫೆಬ್ರುವರಿ 2024, 14:08 IST
Last Updated 17 ಫೆಬ್ರುವರಿ 2024, 14:08 IST
ಅಕ್ಷರ ಗಾತ್ರ

ಸಿದ್ದಾಪುರ: ಪಂಜಾಬ, ಹರಿಯಾಣ, ಉತ್ತರ ರಾಜ್ಯದ ರೈತರು ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿವಿಧ ರೀತಿಯಲ್ಲಿ ತಡೆಯೊಡ್ಡುತ್ತಿರುವುದು ಖಂಡನೀಯ ಎಂದು ರೈತ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರ ನಾಯ್ಕ ಹೇಳಿದರು.

ಪಟ್ಟಣದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಶೇ65ರಷ್ಟು ಜನರು ರೈತರಿದ್ದಾರೆ. ರೈತರ ಸಂಕಷ್ಟಕ್ಕೆ ಪ್ರಧಾನಿ ಸ್ಪಂದಿಸುತ್ತಿಲ್ಲ. ಅನ್ನದಾತರ ಧ್ವನಿಯನ್ನು ಹತ್ತಿಕ್ಕುತ್ತಿದ್ದಾರೆ ಎಂದು ದೂರಿದರು.

ಸ್ವಾಮಿನಾಥನ್ ವರದಿಯನ್ನು ಕೂಡಲೇ ಜಾರಿಗೆ ತರಬೇಕು. ರೈತರ ಸಾಲ ಮನ್ನಾ ಮಾಡಬೇಕು. ಅರಣ್ಯ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು. ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ ಬರುವ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದರು.

ಗೀವಿಂದ ಗೌಡ, ರೇವಣ್ಣ ನಾಯ್ಕ ಶಿರಳಗಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT