ಯಲ್ಲಾಪುರ: ತಾಲ್ಲೂಕಿನ ಕಿರವತ್ತಿ ಬಳಿಯ ಮದ್ನೂರಿನಲ್ಲಿ ಬುಧವಾರ, ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಭಸ್ಮವಾಗಿದೆ. ಸುಮಾರು ಮೂರು ಎಕರೆ ಬೆಳೆ ನಾಶವಾಗಿದೆ.

ಮದ್ನೂರಿನ ಮಂಜುನಾಥ ಶಿರನಾಲ್ಕರ್ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಅವಘಡ ನಡೆದಿದೆ. ಪಂಪ್‌ಸೆಟ್‌ಗೆ ಅಳವಡಿಸಲಾಗಿದ್ದ ವಿದ್ಯುತ್ ತಂತಿಯಲ್ಲಿ ಶಾರ್ಟ್ ಸರ್ಕೀಟ್ ಉಂಟಾಗಿ ಬೆಂಕಿ ತಗುಲಿರಬಹುದೆಂದು ಅಂದಾಜಿಸಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ಆರಿಸಿ ಉಳಿದ ಬೆಳೆಗೂ ಹರಡದಂತೆ ತಡೆಗಟ್ಟಿದ್ದಾರೆ. ಅಗ್ನಿಶಾಮಕ ದಳದ ಠಾಣಾಧಿಕಾರಿ ಶಂಕರಪ್ಪ ಅಂಗಡಿ, ಫೈರ್ ಮೆನ್ ಅಮಿತ ಗುನಗಿ, ನಾಗೇಶ ದೇವಡಿಗ, ರವಿ ಹವಾಲ್ದಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.