ಹೊನ್ನಾವರ: ‘ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಪ್ರದೇಶ ಇಳಿಕೆಯಾಗಿರುವುದಕ್ಕೆ ಕಾರಣವೇನು ಎನ್ನುವುದರ ಕುರಿತು ವಿಮರ್ಶೆ ನಡೆಸುವ ಜೊತೆಗೆ ಪರಿಸರದ ಮಹತ್ವದ ಕುರಿತು ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ಸಂವಿಧಾನದ 48 ಎ ಹಾಗೂ 51 ಎ ಪ್ರಕಾರ ಪರಿಸರ ಸಂರಕ್ಷಣೆ ಸರ್ಕಾರ ಹಾಗೂ ಪ್ರಜೆಗಳ ಆದ್ಯ ಕರ್ತವ್ಯವಾಗಿದೆ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಸ್.ಜಿ. ಪಂಡಿತ ಹೇಳಿದರು.

ಕರ್ನಾಟಕ ಲೋಕಾಯುಕ್ತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಅರಣ್ಯ ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ ಹಾಗೂ ಬೆಂಗಳೂರಿನ ಮಾತೃ ಫೌಂಡೇಷನ್ ಸಹಯೋಗದೊಂದಿಗೆ ತಾಲ್ಲೂಕಿನ ಅರೆಅಂಗಡಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಸಹಸ್ರಾರು ವೃಕಾರೋಪಣ ಅಭಿಯಾನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನ್ಯಾಯಮೂರ್ತಿ ಸಚಿನ್ ಶಂಕರ ಮಗದುಮ್, ‘ಪರಿಸರ ಸಮತೋಲನ ಕಾಯ್ದುಕೊಳ್ಳುವಲ್ಲಿ ಅರಣ್ಯ ಮಹತ್ವದ ಪಾತ್ರ ವಹಿಸುತ್ತದೆ’ ಎಂದು ಹೇಳಿದರು.

ನ್ಯಾಯಮೂರ್ತಿ ಪ್ರದೀಪ ಸಿಂಗ್ ಯೆರೂರ್, ‘ಪ್ಲಾಸ್ಟಿಕ್ ತ್ಯಾಜ್ಯದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಿದ್ದು ಪರಿಸರ ರಕ್ಷಣೆಯಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಅಗತ್ಯ’ ಎಂದು ಹೇಳಿದರು.

ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ, ‘ಪರಿಸರ ರಕ್ಷಣೆ ನಮ್ಮ ಸ್ವಂತ ಕೆಲಸವೆನ್ನುವ ಭಾವನೆ ಅಗತ್ಯ’ ಎಂದರು.

ನ್ಯಾಯಮೂರ್ತಿ ಸಿ.ಎಂ.ಜೋಶಿ, ‘ಸುಸ್ಥಿರ ಅಭಿವೃದ್ಧಿಗೆ ಆದ್ಯತೆ ನೀಡಬೇಕಿದ್ದು ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ ಇದೆ’ ಎಂದರು.

ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಮಾತನಾಡಿ, ಪ್ರಕೃತಿಗೆ ತಾಯಿ ಸ್ಥಾನ ನೀಡಬೇಕಿದೆ' ಎಂದು ಹೇಳಿದರು.

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ, ‘ಜಿಲ್ಲೆಯಲ್ಲಿ ಅರಣ್ಯ ಮತ್ತು ಜನರ ನಡುವೆ ಅವಿನಾಭಾವ ಸಂಬಂಧವಿದೆ’ ಎಂದು ತಿಳಿಸಿದರು.

ಪಶ್ಚಿಮ ಘಟ್ಟ ಸಂರಕ್ಷಣಾ ಪಡೆ ಅಧ್ಯಕ್ಷ ಮೊಹಮ್ಮದ್ ತಬ್ರೇಜ್ ಆಲಂ ಶರೀಫ್, ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ವಕೀಲ ಜಿ.ಕೆ.ಭಟ್, ಆರ್.ಎಸ್.ರವಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ ನಾಯ್ಕ, ಜಿಲ್ಲಾ ನ್ಯಾಯಾಧೀಶ ಮಾಯಣ್ಣ ಎಲ್., ಹಿರಿಯ ಸಿವಿಲ್ ನ್ಯಾಯಾಧೀಶೆ ದಿವ್ಯಶ್ರೀ ಸಿ.ಎಂ., ಡಿಸಿಎಫ್ ಯೋಗೀಶ ಸಿ.ಕೆ, ವಕೀಲರ ಸಂಘದ ಅಧ್ಯಕ್ಷ ವಿ.ಎಂ.ಭಂಡಾರಿ, ಕಾರ್ಯದರ್ಶಿ ಉದಯ ನಾಯ್ಕ ಇದ್ದರು.

ಹಿರಿಯ ವಕೀಲ ವಿಘ್ನೇಶ್ವರ ಶಾಸ್ತ್ರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಕೀಲ ಸತೀಶ ಭಟ್ಟ ಸ್ವಾಗತಿಸಿದರು.

ಅಕ್ರಮ ಗಣಿಗಾರಿಕೆ ಅರಣ್ಯ ಮತ್ತು ಪರಿಸರ ನಾಶ ಮಾಡುವವರ ವಿರುದ್ಧ ಹಾಗೂ ಇದಕ್ಕೆ ಸಹಕರಿಸುವ ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಲಾಗುವುದು
ನ್ಯಾಯಮೂರ್ತಿ ಬಿ.ವೀರಪ್ಪ ಉಪ ಲೋಕಾಯುಕ್ತ

ಒಂದೇ ದಿನ 6 ಸಾವಿರ ಸಸಿ ನಾಟಿ:

ಅರೆಅಂಗಡಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಂದೇ ದಿನ 6 ಸಾವಿರ ಸಸಿಗಳನ್ನು ನೆಡಲಾಯಿತು. ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಇದನ್ನು ಖಚಿತಪಡಿಸಿದರು. ಹೈಕೋರ್ಟ್ನ ಐವರು ನ್ಯಾಯಮೂರ್ತಿಗಳು ಇಬ್ಬರು ಉಪ ಲೋಕಾಯುಕ್ತ ನ್ಯಾಯಮೂರ್ತಿಗಳು ಈ ಕ್ಷಣಕ್ಕೆ ಸಾಕ್ಷಿಯಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.