ಕಾರವಾರ: ವಿಧಾನ ಪರಿಷತ್ ಮಾಜಿ ಸದಸ್ಯೆ ಶುಭಲತಾ ಅಸ್ನೋಟಿಕರ್ (68) ವಯೋಸಹಜ ಅನಾರೋಗ್ಯದಿಂದ ಬುಧವಾರ ಇಲ್ಲಿನ ಸ್ವಗೃಹದಲ್ಲಿ ನಿಧನರಾದರು.
2002 ರಿಂದ 2008ರ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ಉತ್ತರ ಕನ್ನಡ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು.
ಕಾರವಾರ ಡಾಕ್ ಆ್ಯಂಡ್ ಪೋರ್ಟ್ ವರ್ಕರ್ಸ್ ಯೂನಿಯನ್ ಅಧ್ಯಕ್ಷರಾಗಿ ಅವರು ಸದ್ಯ ಕಾರ್ಯನಿರ್ವಹಿಸುತ್ತಿದ್ದರು. ಮೃತರಿಗೆ ಪುತ್ರ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಗುರುವಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.