ಯಲ್ಲಾಪುರ: ತಾಲ್ಲೂಕಿನ ಕಿರವತ್ತಿ ಬಳಿ ಗುರುವಾರ ಸಂಜೆ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತವಾಗಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೊಸಳ್ಳಿ – ಗಾಂವಠಾಣಾಕ್ಕೆ ಹೋಗುವ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ಅಪಘಾತ ನಡೆದಿದೆ. ಅಂಕೋಲಾ ಕಡೆಗೆ ತೆರಳುತ್ತಿದ್ದ ದೆಹಲಿ ನೋಂದಣಿ ಸಂಖ್ಯೆ ಹೊಂದಿದ್ದ ಕಾರು ಹಾಗೂ ಹುಬ್ಬಳ್ಳಿಯತ್ತ ಸಾಗುತ್ತಿದ್ದ ಮಹಾರಾಷ್ಟ್ರ ನೋಂದಣಿಯ ಲಾರಿ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತವಾಗಿದೆ.

ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಮೃತಪಟ್ಟವರು. ಕಾರು ಪುಷ್ಪಾ ನಾಯರ್ ಎಂಬುವವರ ಹೆಸರಿನಲ್ಲಿ ನೋಂದಣಿಯಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭಿಸಿದೆ. ಹೀಗಾಗಿ ಕಾರು ಕೇರಳಕ್ಕೆ ತೆರಳುತ್ತಿತ್ತು ಎಂದು ಶಂಕಿಸಲಾಗಿದೆ.
ಪೋಲಿಸರು ಸ್ಥಳಕ್ಕೆ ತೆರಳಿದ್ದು, ತನಿಖೆ ಕೈಗೊಂಡಿದ್ದಾರೆ.

ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಕ್ಕೆ ಯಲ್ಲಾಪುರದಿಂದ ತೆರಳುತ್ತಿದ್ದ ಕ್ರೇನ್ ಕೂಡ ಅಪಘಾತಕ್ಕೀಡಾಗಿದೆ. ಮಾವಳ್ಳಿ ಕ್ರಾಸ್ ಬಳಿ ಬೀಡಾಡಿ ದನಗಳು ಅಡ್ಡ ಬಂದು ಕ್ರೇನ್ ಪಲ್ಟಿಯಾಗಿದೆ. ಅದರ ಚಾಲಕನ ಕೈಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.