ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ನಿರಂತರ ಮಳೆ ಸುರಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಜಲಾವೃತ, ಗುಡ್ಡ ಕುಸಿತದಿಂದ ಸಂಚಾರ ಅಸ್ತವ್ಯಸ್ತಗೊಂಡಿದೆ.

ಚತುಷ್ಪಥ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಕಾರವಾರ ತಾಲ್ಲೂಕಿನ ಚೆಂಡಿಯಾ ಬಳಿ ನೀರು ತುಂಬಿಕೊಂಡಿದೆ. ಕೆಲ ತಾಸುಗಳಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಕಿಲೋ ಮೀಟರ್ ಗಟ್ಟಲೆ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ.

ಶಿರಸಿ ತಾಲ್ಲೂಕಿನ ರಾಗಿಹೊಸಳ್ಳಿ ಸಮೀಪ ಗುಡ್ಡ ಕುಸಿದು ಶಿರಸಿ-ಕುಮಟಾ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766ಇ ಮೇಲೆ ಮಣ್ಣಿನ ರಾಶಿ ಆವರಿಸಿಕೊಂಡಿದೆ. ಅಲ್ಲದೆ ಇದೇ ರಸ್ತೆಯಲ್ಲಿ ಕುಮಟಾ ತಾಲ್ಲೂಕಿನ ಕತಗಾಲ ಸಮೀಪ ಚಂಡಿಕಾ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಜಲಾವೃತವಾಗಿದೆ.

ಹೊನ್ನಾವರ ತಾಲ್ಲೂಕಿನ ಖರ್ವಾ ಬಳಿ ಹೊನ್ನಾವರ-ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-69ರಲ್ಲಿ ಗುಡ್ಡ ಕುಸಿದು ಕೆಲ ತಾಸು ಸಂಚಾರ ಸ್ಥಗಿತವಾಗಿತ್ತು. ರಸ್ತೆಗೆ ಎರಗಿದ್ದ ಮಣ್ಣಿನ ರಾಶಿ, ಬಂಡೆಕಲ್ಲು ತೆರವುಗೊಳಿಸಲಾಗಿದೆ. ಸದ್ಯ ಈ ಮಾರ್ಗದಲ್ಲಿ ಸಂಚಾರ ಆರಂಭವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.