ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಸಿ: ದುಬೈನಲ್ಲಿ ಅಂಗಡಿ ಕೊಡಿಸುವುದಾಗಿ ₹35 ಲಕ್ಷ ವಂಚನೆ

Published 11 ಆಗಸ್ಟ್ 2024, 13:45 IST
Last Updated 11 ಆಗಸ್ಟ್ 2024, 13:45 IST
ಅಕ್ಷರ ಗಾತ್ರ

ಶಿರಸಿ: ದುಬೈನಲ್ಲಿ ಅಂಗಡಿ ಕೊಡಿಸುವುದಾಗಿ ನಂಬಿಸಿ, ಮಂಗಳೂರು ಮೂಲದ ವ್ಯಕ್ತಿಯೊಬ್ಬನಿಗೆ ಶಿರಸಿ ಮೂಲದ ಮೂವರು ₹35 ಲಕ್ಷ ವಂಚನೆ ಮಾಡಿದ ಕುರಿತು ಶನಿವಾರ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲ್ಲೂಕಿನ ಹುಲೇಕಲ್ ಸಮೀಪದ ಹೆಂಚರಟಾದ ಅಬ್ದುಲ್ ಮತಿನ‌್ ಅಬ್ದುಲ್ ಗಫಾರ ಸಾಬ್, ಅಬ್ದುಲ್ ರೆಹಮಾನ್‌ ಅಬ್ದುಲ್ ಗಫಾರ್‌ ಸಾಬ್ ಹಾಗೂ ನಾಝೀಯಾ ಅಬ್ದುಲ್ ಮತೀನ್  ಆರೋಪಿಗಳಾಗಿದ್ದಾರೆ. ಈ ಮೂವರು ಮಂಗಳೂರು ಹಂಪನಕಟ್ಟಾ ಲೈಟ್ ಹೌಸ್ ಹಿಲ್ ರಸ್ತೆಯ ಬಿ.ಐ.ಮೊಹಮ್ಮದ್‌ ರಫೀಕ್ ಎಂಬಾತನಿಗೆ ದುಬೈನಲ್ಲಿ ಅಂಗಡಿ ಕೊಡಿಸುವುದಾಗಿ ನಂಬಿಸಿ ₹35 ಲಕ್ಷ ಪಡೆದು, ಅಂಗಡಿ ಕೊಡಿಸದೇ, ಪಡೆದ ಹಣವನ್ನು ಹಿಂದಿರುಗಿಸದೇ ಮೋಸ ಮಾಡಿದ್ದಾರೆ ಎಂದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT