ಶಿರಸಿ: ‘ರೋಗಗಳ ಮುನ್ಸೂಚನೆ ಅರಿತು ಆರಂಭದಲ್ಲೇ ಪತ್ತೆ ಮಾಡುವುದರಿಂದ ಅಮೂಲ್ಯವಾದ ಜೀವಹಾನಿಯನ್ನು ತಡೆಯಲು ಸಾಧ್ಯವಿದೆ’ ಎಂದು ಉಪವಿಭಾಗಾಧಿಕಾರಿ ಚಂದ್ರಶೇಖರ್ ಆರ್.ಜಿ. ಅಭಿಪ್ರಾಯಪಟ್ಟರು.

ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಬುಧವಾರ ಸ್ಕೊಡ್ವೆಸ್ ಸಂಸ್ಥೆ, ರೋಟರಿ ಕ್ಲಬ್, ಗುಜರಾತ್ನ ದೇಸಾಯಿ ಫೌಂಡೇಶನ್ ಟ್ರಸ್ಟ್, ಶಿವಮೊಗ್ಗದ ನಾರಾಯಣ ಹೆಲ್ತ್ ಹಾಗೂ ಭಾರತೀಯ ವೈದ್ಯಕೀಯ ಸಂಘ ಶಿರಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ‘ಉತ್ತರ ಕನ್ನಡದಂತಹ ಗುಡ್ಡಗಾಡು ಜಿಲ್ಲೆಯ ಜನರು ಸುಧಾರಿತ ಚಿಕಿತ್ಸೆಗಾಗಿ ಪಕ್ಕದ ಜಿಲ್ಲೆಗಳಾದ ಧಾರವಾಡ, ದಕ್ಷಿಣ ಕನ್ನಡ ಅಥವಾ ಶಿವಮೊಗ್ಗದಂತಹ ನಗರಗಳಿಗೆ ಅಲೆಯಬೇಕಾದ ಅನಿವಾರ್ಯತೆ ಇದೆ. ಇಂತಹ ಸಂದರ್ಭದಲ್ಲಿ ತಜ್ಞ ವೈದ್ಯರೇ ಜನರ ಬಳಿಗೆ ಬಂದು ತಪಾಸಣೆ ನಡೆಸುವುದು ಅಶಾಯಕರಿಗೆ ವರದಾನವಾಗಲಿದೆ’ ಎಂದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ ಮಾತನಾಡಿ, ‘ಗ್ರಾಮೀಣ ಭಾಗದ ಜನರಿಗೆ ಸೂಕ್ತ ಸಮಯದಲ್ಲಿ ವೈದ್ಯಕೀಯ ನೆರವು ಸಿಗದೇ ಇರುವುದರಿಂದ ಆರ್ಥಿಕ ಹೊರೆ ಹಾಗೂ ಪ್ರಾಣಾಪಾಯ ಉಂಟಾಗುತ್ತಿದೆ. ಇಂತಹ ಶಿಬಿರಗಳು ಜನಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಪೂರಕವಾಗಿವೆ’ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಅಧ್ಯಕ್ಷ ಶ್ರೀನಿವಾಸ ನಾಯ್ಕ ಮಾತನಾಡಿ, ‘ಸಂಸ್ಥೆಯು ಸಮಾಜದ ಬೇಡಿಕೆಗೆ ತಕ್ಕಂತೆ ಸೇವೆ ಸಲ್ಲಿಸುತ್ತಿದ್ದು, ಮುಂದಿನ ದಿನಗಳಲ್ಲಿ ಇಂತಹ ಶಿಬಿರಗಳನ್ನು ನೇರವಾಗಿ ಹಳ್ಳಿಗಳಲ್ಲೇ ಆಯೋಜಿಸುವ ಗುರಿ ಹೊಂದಲಾಗಿದೆ’ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸ್ಕೊಡ್ವೆಸ್ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟೇಶ ನಾಯ್ಕ,‘ಸಂಸ್ಥೆಯು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಿದೆ’ ಎಂದು ತಿಳಿಸಿದರು. ಸ್ಕೊಡ್ವೆಸ್ ಸಂಸ್ಥೆಯ ಸರಸ್ವತಿ ಎನ್. ರವಿ, ವೈದ್ಯಕೀಯ ಸಂಘದ ಡಾ. ಹರ್ಷ ನಾಡಿಗೇರ ಹಾಗೂ ವಿವಿಧ ಆಸ್ಪತ್ರೆಗಳ ತಜ್ಞ ವೈದ್ಯರಾದ ಡಾ. ದಿನೇಶ ಹೆಗಡೆ, ಡಾ. ಶಶಾಂಕ, ಡಾ. ರಿತಿನ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಸ್ಕೊಡ್ವೆಸ್ ಕಾರ್ಯಕ್ರಮಾಧಿಕಾರಿ ನಾರಾಯಣ ಹೆಗಡೆ ನಿರ್ವಹಿಸಿ ವಂದಿಸಿದರು.

500ಕ್ಕೂ ಅಧಿಕ ಫಲಾನುಭವಿಗಳು

ಶಿಬಿರದಲ್ಲಿ ಹೃದ್ರೋಗ ಎಲುಬು ಮತ್ತು ಕೀಲು ಕಣ್ಣು ಚರ್ಮರೋಗ ಸ್ತ್ರೀ ರೋಗ ಹಾಗೂ ದಂತ ಚಿಕಿತ್ಸೆ ಸೇರಿದಂತೆ ವಿವಿಧ ವಿಭಾಗಗಳ 16ಕ್ಕೂ ಹೆಚ್ಚು ತಜ್ಞ ವೈದ್ಯರು ಪಾಲ್ಗೊಂಡು 500ಕ್ಕೂ ಅಧಿಕ ಫಲಾನುಭವಿಗಳ ಆರೋಗ್ಯ ತಪಾಸಣೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.