ಶಿರಸಿ: ತಾಲ್ಲೂಕಿನ ಹೋಂ ಸ್ಟೇ ಒಂದರಲ್ಲಿ ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ ಗುಂಪಿನ ಮೇಲೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿ ₹49.50 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ಘಟನೆ ಸಂಬಂಧ 19 ಜನರನ್ನು ಬಂಧಿಸಲಾಗಿದೆ.

ತಾಲ್ಲೂಕಿನ ಭೈರುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಗಸಾಲ ಗ್ರಾಮದ ವಿ.ಆರ್.ಆರ್. ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಜೂಜಾಟ ಆಡುವ ವೇಳೆ ಪೊಲೀಸ್ ದಾಳಿ ನಡೆದಿದೆ.

ಬಂಧಿತರೆಲ್ಲರೂ ಹಾವೇರಿ, ದಾವಣಗೆರೆ, ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ಖಚಿತ ಮಾಹಿತಿ ಆಧರಿಸಿ ಡಿಎಸ್ಪಿ ಗೀತಾ ಪಾಟೀಲ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳ ಜತೆ 7 ಕಾರು ಹಾಗೂ 20ಕ್ಕೂ ಹೆಚ್ಚಿನ ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ.

ದಾಳಿ ವೇಳೆ ಸಿಕ್ಕ ನಗದು ಮೊತ್ತವು ಈವರೆಗೆ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ನಡೆದ ದಾಳಿ ವೇಳೆ ಸಿಕ್ಕ ಉಳಿದೆಲ್ಲ ಮೊತ್ತಕ್ಕಿಂತ ಹೆಚ್ಚಿನದಾಗಿದೆ ಎನ್ನುವುದು ಪೊಲೀಸ್ ಇಲಾಖೆ ಮಾಹಿತಿಯಾಗಿದೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
.ಕಲಬುರಗಿ | ಜೂಜಾಟ: 7 ಮಂದಿ ವಿರುದ್ಧ ಪ್ರಕರಣ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.