ಹೊನ್ನಾವರ: ತಾಲ್ಲೂಕಿನಲ್ಲಿ ಈ ಬಾರಿ ಒಟ್ಟು 120 ಸಾರ್ವಜನಿಕ ಗಣೇಶೋತ್ಸವ ಪೆಂಡಾಲ್ ಸ್ಥಾಪಿಸಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ಪೂಜೆ ಸಲ್ಲಿಸಲಾಗಿದ್ದು, ಇವುಗಳನ್ನು ಶನಿವಾರ ಹಾಗೂ ಭಾನುವಾರ ವಿಸರ್ಜನೆ ಮಾಡಲಾಗಿದೆ.

ಭಾನುವಾರ ಒಂದೇ ದಿನ 57 ಗಣಪತಿ ಮೂರ್ತಿಗಳ ವಿಸರ್ಜನಾ ಕಾರ್ಯ ನಡೆದಿದ್ದು ಮೆರವಣಿಗೆ ಸಂದರ್ಭದಲ್ಲಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ ಎಂದು ಸಿಪಿಐ ಸಿದ್ದರಾಮೇಶ್ವರ ತಿಳಿಸಿದರು.

ಡಿಜೆ ನಿಯಮ ಉಲ್ಲಂಘನೆ?: ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಪಾಲಿಸಬೇಕಾದ ನಿಯಮಗಳ ಕುರಿತಂತೆ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳಿಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮೊದಲೇ ಪೊಲೀಸ್ ಇಲಾಖೆ ನೋಟಿಸ್ ನೀಡಲಾಗಿದೆ.

ಪೊಲೀಸರ ಸೂಚನೆಯ ನಡುವೆಯೂ ಕೆಲ ಗಣೇಶೋತ್ಸವದ ಮೆರವಣಿಗೆಯ ಸಂದರ್ಭದಲ್ಲಿ, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಭಾರಿ ಶಬ್ಧ ಉಂಟು ಮಾಡುವ ಡಿಜೆ ಮಾದರಿಯ ಮೈಕ್ ಬಳಸಲಾಗಿರುವ ಜೊತೆಗೆ ಶಬ್ಧಮಾಲಿನ್ಯ ಉಂಟುಮಾಡುವ ಹಾಗೂ ಪರಿಸರಕ್ಕೆ ಹಾನಿಕಾರಕವಾದ ಪಟಾಕಿಗಳನ್ನು ಸಿಡಿಸಲಾಗಿದೆ. ಪೊಲೀಸರ ಉಪಸ್ಥಿತಿಯಲ್ಲೇ ಎಲ್ಲವೂ ನಡೆದಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.