ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರ | ಹೆಣ್ಣು ಶಿಶು ಎತ್ತಿ ಸಂಭ್ರಮಿಸಿದ ಜಿಲ್ಲಾಧಿಕಾರಿ

Published 24 ಜನವರಿ 2024, 14:43 IST
Last Updated 24 ಜನವರಿ 2024, 14:43 IST
ಅಕ್ಷರ ಗಾತ್ರ

ಕಾರವಾರ: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಇಲ್ಲಿನ ಕ್ರಿಮ್ಸ್ ಅಧೀನದ ಜಿಲ್ಲಾಸ್ಪತ್ರೆಗೆ ಬುಧವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಹೆಣ್ಣು ಶಿಶು ಹೆತ್ತವರಿಗೆ ಅಭಿನಂದಿಸಿ ಸಿಹಿ ಹಂಚಿದರು.

ಹೆರಿಗೆ ವಾರ್ಡ್‍ನಲ್ಲಿ ಪರಿಶೀಲನೆ ನಡೆಸುವ ಜತೆಗೆ ಬಾಣಂತಿಯರ ಯೋಗಕ್ಷೇಮವನ್ನು ವಿಚಾರಿಸಿದರು. ಇದೇ ವೇಳೆ ನವಜಾತ ಹೆಣ್ಣು ಶಿಶುವನ್ನು ಎತ್ತಿಕೊಂಡು ಸಂಭ್ರಮಿಸಿದರು.

‘ಸಮಾಜದಲ್ಲಿ ಹೆಣ್ಣು ಮತ್ತು ಗಂಡು ಇಬ್ಬರೂ ಸಮಾನರಾಗಿದ್ದಾರೆ. ಹೆಣ್ಣು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಮಾಜವು ಸಹಕರಿಸಬೇಕು. ಹೆಣ್ಣು ಮತ್ತು ಗಂಡು ಮಕ್ಕಳ ನಡುವೆ ಪೋಷಕರು ಭೇದ ಮಾಡಬಾರದು’ ಎಂದು ಜಿಲ್ಲಾಧಿಕಾರಿ ಆಸ್ಪತ್ರೆಯಲ್ಲಿದ್ದ ಮಹಿಳೆಯರಿಗೆ ಕಿವಿಮಾತು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಎಚ್.ಎಚ್.ಕುಕನೂರು, ಕ್ರಿಮ್ಸ್ ವೈದ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT