ಕಾರವಾರ: ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ನಗರದ ದೇವಿ ದೇವಸ್ಥಾನಗಳಿಗೆ ಸೋಮವಾರ ಭೇಟಿ ನೀಡಿದರು. ನಗರದ ಸಂತೋಷಿ ಮಾತಾ ಹಾಗೂ ಸದಾಶಿವಗಡದ ದುರ್ಗಾದೇವಿ ದೇವಸ್ಥಾನಗಳಿಗೆ ತೆರಳಿ ನವರಾತ್ರಿ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಲ್ಲಿನ ದೇವಸ್ಥಾನಗಳಿಗೆ ಭೇಟಿ ನೀಡುವಂತೆ ಶಾಸಕಿ ರೂಪಾಲಿ ನಾಯ್ಕ ಹಾಗೂ ದೇವಸ್ಥಾನಗಳ ಭಕ್ತರು ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದೇನೆ’ ಎಂದರು.

‘ಗೋವಾದ ಮೂಲಕ ಅಂತರರಾಜ್ಯ ಸಂಚರಿಸುವವರಿಗೆ ಇರುವ ತೊಡಕುಗಳ ನಿವಾರಣೆಗೆ ಕ್ರಮಗಳ ಬಗ್ಗೆ ಪರಿಶೀಲಿಸಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಪ್ರವಾಸೋದ್ಯಮ ಚುರುಕು:‘ಗೋವಾದಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳು ಆರಂಭವಾಗಿವೆ. ಕೇಂದ್ರ ಸರ್ಕಾರವು ದೇಶೀಯ ವಿಮಾನಗಳ ಸಂಚಾರಕ್ಕೆ ಅವಕಾಶ ನೀಡಿದೆ. ಅ.15ರಂದು ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ಶುರುವಾಗುತ್ತದೆ’ ಎಂದೂ ಹೇಳಿದರು.

‘ಗೋವಾದಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್ ಪ್ರಗತಿ ಶೇ 100 ಆಗಿದೆ. ನವೆಂಬರ್ ಒಳಗೆ ಎರಡನೇ ಡೋಸ್ ಕೂಡ ಪೂರ್ಣಗೊಳಿಸಲು ಪ್ರಯತ್ನಿಸುತ್ತಿದ್ದೇವೆ’ ಎಂದರು.

ಕಾರವಾರ– ಅಂಕೋಲಾ ಶಾಸಕಿ ರೂಪಾಲಿ ನಾಯ್ಕ, ಬಿ.ಜೆ.ಪಿ ಪ್ರಮುಖ ಗಣಪತಿ ಉಳ್ವೇಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.