ಗೋಕಾಕ: ಲಿಂಗತ್ವ ಅಲ್ಪಸಂಖ್ಯಾತರು ಶಕ್ತಿ ಯೋಜನೆ ಅನುಷ್ಠಾನದಲ್ಲಿ ಆಗುತ್ತಿರುವ ತಾರತಮ್ಯವನ್ನು ಖಂಡಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ಮೆರವಣಿಗೆ ಮೂಲಕ ಮಿನಿ ವಿಧಾನಸೌಧಕ್ಕೆ ತೆರಳಿ ಉಪ-ತಹಶೀಲ್ದಾರ್ ಎಸ್.ಟಿ.ಬೆಟಗೇರಿ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ರವಾನಿಸಿದರು.

ರಾಜ್ಯದ ಹಲವು ಭಾಗಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳಿಗೆ ಬಸ್ ಟಿಕೇಟ್ ನೀಡಲು ಕೆಲ ನಿರ್ವಾಹಕರು ನಿರಾಕರಿಸುವುದು, ಗುರ್ತಿನ ಬಗ್ಗೆ ಪ್ರಶ್ನಿಸಿ ಅವಮಾನಿಸುವುದು ಹಾಗೂ ಸಾರ್ವಜನಿಕವಾಗಿ ಕಿರುಕುಳ ನೀಡುತ್ತಿರುವ ಘಟನೆಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಪ್ರತಿಭಟನೆಯಲ್ಲಿ ಐನಾ ಶೇಖ್, ಮೋಹನಗೌಡ ಪಾಟೀಲ, ಮೀಶಾ ತಳವಾರ, ಮುಷಾಖಾನ, ಜಾಸಮೀನ, ಭೀಮಪ್ಪ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-21-622187800

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.