ಗೋಕರ್ಣ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾ ಸೇವಿಸಿದ ಆರೋಪದ ಮೇಲೆ ಮೂರು ಪ್ರತ್ಯೇಕ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಭಾನುವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗುಜರಾತ್ ರಾಜ್ಯದ ಗಾಂಧಿಧಾಮಿನ ಕಾರ್ತೀಕ ಕೆ. ರಾಜನ್ (24), ಕಚ್ನ ಅಭಿಷೇಕ ಮಂಜುನಾಥ ಪೂಜಾರಿ (23) ಮತ್ತು ರುದ್ರಶರ್ಮಾ ಸುಭಾಷ್ ಶರ್ಮಾ (24) ಗಾಂಜಾ ಸೇವಿಸಿದ ಆರೋಪಿಗಳು.

ಇಲ್ಲಿಯ ಮೇಲಿನಕೇರಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ಪದಾರ್ಥ ಗಾಂಜಾ ಸೇವಿಸಿ, ಅಮಲಿನಲ್ಲಿ ಅಲೆದಾಡುತ್ತಿದ್ದಾಗ ಪೊಲೀಸ್ ನಿರೀಕ್ಷಕ ಶ್ರೀಧರ ಎಸ್.ಆರ್. ಮತ್ತು ಉಪನಿರೀಕ್ಷಕ ಸುನೀಲ್ ಎಂ.ಎ. ಅವರ ನೇತೃತ್ವದ ಪೊಲೀಸ್ ತಂಡಕ್ಕೆ ಸಿಕ್ಕಿಬಿದ್ದಿದ್ದಾರೆ.

ಸಂಶಯ ಬಂದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿದ್ದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-20-1236410479

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.