ಗೋಕರ್ಣ: ಇಲ್ಲಿಯ ಅಜ್ಜಿಹಕ್ಕಲ ಗ್ರಾಮದ ಗುಂಬಳಿ ಎಂಬಲ್ಲಿ ಪುರಾತನ ಕಾಲದಿಂದಲೂ ಇದ್ದ ಭೀಮಕುಂಡ ಸಾರ್ವಜನಿಕ ಕೆರೆಯಲ್ಲಿ ಬಿದ್ದಿದ್ದ ಬೃಹತ್ ಗಾತ್ರದ ಮರವನ್ನು ಶುಕ್ರವಾರ ಕುಮಟಾ ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಉಪಸ್ಥಿತಿಯಲ್ಲಿ ಗ್ರಾಮ ಪಂಚಾಯಿತಿ ಸ್ವಚ್ಛತಾ ಸಿಬ್ಬಂದಿ ತೆರವುಗೊಳಿಸಿದರು.

ಈ ಕೆರೆ ಎತ್ತರದ ಪ್ರದೇಶದಲ್ಲಿದ್ದು, ಸುಮಾರು 20 ಮನೆಗೆ ನೀರಾವರಿಯ ಮೂಲವಾಗಿದೆ. ಪುರಾತನ ಕಾಲದಿಂದಲೂ ಪಾಳಿಯ ಪದ್ಧತಿಯಲ್ಲಿ ಒಂದು ಮನೆಯಿಂದ ಮತ್ತೊಂದು ಮನೆಗೆ ನೀರನ್ನು ಬಿಡುವ ರೂಢಿ ನಡೆದುಕೊಂಡು ಬಂದಿದೆ. ಸಾಕಷ್ಟು ಜಲ ಮೂಲವಿರುವ ಗುಂಬಳೆಯ ಈ ಸರ್ಕಾರಿ ಕೆರೆಯಲ್ಲಿ ಕೆಲವು ದಿನಗಳ ಹಿಂದೆ ಬೃಹತ್ ಮರ ಬಿದ್ದಿತ್ತು. ನೀರಿನ ಹರಿವಿಗೆ ಅಡ್ಡಿ ಉಂಟಾಗಿತ್ತು. ಕೆರೆಯ ಸ್ವಚ್ಛತೆ ಬಗ್ಗೆ ಸ್ಥಳೀಯರು ಗ್ರಾಮ ಪಂಚಾಯಿತಿಗೆ ಮನವಿ ಮಾಡಿದ್ದರು.

ಆದರೆ ಕೆರೆ ಪಕ್ಕದ ಖಾಸಗಿ ಜಾಗದವರು ಬಿದ್ದ ಮರದ ತೆರವಿನ ಕಾರ್ಯಕ್ಕೆ ಅಡ್ಡಿಪಡಿಸುತ್ತಿದ್ದರು. ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಕುರಿತು ಕುಮಟಾ ತಹಶೀಲ್ದಾರ್ಗೆ ಸಾರ್ವಜನಿಕರು ಮನವಿ ಮಾಡಿದ್ದರು. ಅದರಂತೆ ಕುಮಟಾ ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ್ ಶುಕ್ರವಾರ ಖುದ್ದು ಸ್ಥಳಕ್ಕೆ ಆಗಮಿಸಿ ಮರ ತೆಗೆದು ಸ್ವಚ್ಛಗೊಳಿಸಲು ಸ್ಥಳೀಯ ಆಡಳಿತಕ್ಕೆ ಸೂಚಿಸಿದರು.

ತಹಶೀಲ್ದಾರ್ ಸೂಚನೆಯಂತೆ ಗ್ರಾಮ ಪಂಚಾಯಿತಿ ಸ್ವಚ್ಛತಾ ಸಿಬ್ಬಂದಿ ಕೆರೆಯಲ್ಲಿ ಬಿದ್ದಿದ್ದ ಮರವನ್ನು ತೆರವಿಗೊಳಿಸಿದರು.

ಪೊಲೀಸ್ ನಿರೀಕ್ಷಕ ಶ್ರೀಧರ ಎಸ್.ಆರ್. ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-20-1964907890

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.