ಗೋಕರ್ಣ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ, ಎರಡು ಪ್ರತ್ಯೇಕ ಪ್ರಕರಣದಲ್ಲಿ ಯುವತಿಯೂ ಸೇರಿದಂತೆ ಇಬ್ಬರು ಆರೋಪಿಗಳನ್ನು ಬುಧವಾರ ಸಂಜೆ ಪೊಲೀಸರು ವಶಕ್ಕೆ ಪಡೆದು ಕ್ರಮ ಜರುಗಿಸಿದ್ದಾರೆ.

ಬೆಂಗಳೂರಿನ ಸುಬ್ರಹ್ಮಣ್ಯಪುರದ ಅಭಿಷೇಕ ಎ.ಜಿ. (33) ಮತ್ತು ಮಹಾರಾಷ್ಟ್ರದ ಠಾಣಾ ಜಿಲ್ಲೆಯ ಪಶ್ಚಿಮ ದೊಂಬಿವಲ್ಲಿಯ ಯುವತಿ ಪ್ರಾಚಿ ಅರುಣ ಮಾತ್ರೆ (27) ಗಾಂಜಾ ಸೇವನೆ ಮಾಡಿದ ಆರೋಪಿಗಳಾಗಿದ್ದಾರೆ.

ಇಬ್ಬರೂ ಸಾರ್ವಜನಿಕ ಸ್ಥಳದಲ್ಲಿ ಮಾದಕ ಪದಾರ್ಥ ಗಾಂಜಾ ಸೇವಿಸಿ, ಅಮಲಿನಲ್ಲಿ ಅಲೆದಾಡುತ್ತಿದ್ದಾಗ ಪೊಲೀಸ್ ಉಪನಿರೀಕ್ಷಕ ಅನೀಲ್ ಬಿ.ಎಂ. ನೇತೃತ್ವದ ಪೊಲೀಸ್ ತಂಡಕ್ಕೆ ಸಿಕ್ಕಿಬಿದ್ದಿದ್ದಾರೆ.

ಸಂಶಯ ಬಂದ ಪೊಲೀಸರು ಆರೋಪಿಗಳನ್ನು ಪಂಚರ ಸಮಕ್ಷಮ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿದ್ದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.