ಗೋಕರ್ಣ: ಮಾನಸಿಕ ಖಿನ್ನತೆಗೆ ಒಳಗಾಗಿ ಗೋಕರ್ಣಕ್ಕೆ ಬಂದಿದ್ದ ದಾವಣಗೇರಿ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ದೇವನಾಯಕನಹಳ್ಳಿಯ ನಿವಾಸಿಯೊಬ್ಬರು ಭಾನುವಾರ ತಾವು ಉಳಿದುಕೊಂಡಿದ್ದ ವಸತಿಗೃಹದಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತರನ್ನು ಶಿವಕುಮಾರ ಮಾರಿಯಪ್ಪ (24) ಎಂದು ಗುರುತಿಸಲಾಗಿದೆ. ಮೇ 31ರಂದು ಗೋಕರ್ಣಕ್ಕೆ ಬಂದಿದ್ದ ಅವರು ಸಮದ್ರತೀರದ ವಸತಿ ಗೃಹವೊಂದರಲ್ಲಿ ವಾಸ್ತವ್ಯ ಮಾಡಿದ್ದರು. ಸಂಜೆಯಾದರೂ ಕೊಠಡಿಯಿಂದ ಹೊರಗೆ ಬಾರದ ಕಾರಣ ಸಂಶಯಗೊಂಡು ಕಿಟಕಿಯನ್ನು ತೆರೆದು ನೋಡಿದಾಗ ನೇಣುಹಾಕಿಕೊಂಡಿರುವುದು ಕಂಡು ಬಂತು.

ನಂತರ ಪೊಲೀಸರು ಸ್ಥಳಕ್ಕೆ ಬಂದು ರೂಮನ್ನು ಒಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಬಗ್ಗೆ ಮೃತ ಶಿವಕುಮಾರರ ತಂದೆ ಪೊಲೀಸರಿಗೆ ದೂರು ನೀಡಿದ್ದು, ದೂರಿನಲ್ಲಿ ಮಗ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದನ್ನು ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-20-699470373

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.