ಕಾರವಾರ: ಪುರಾಣ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನವು ಅ.5ರಿಂದ ಭಕ್ತರಿಗೆ ತೆರೆದುಕೊಳ್ಳಲಿದೆ. ಸಾರ್ವಜನಿಕರು ಎಂದಿನಂತೆ ಆತ್ಮಲಿಂಗದ ದರ್ಶನ ಪಡೆಯಬಹುದು ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ.

ಅಂದಿನಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸೇರಿದಂತೆ ಎಲ್ಲ ಸೇವಾವಕಾಶಗಳು ಇರುತ್ತವೆ. ಕೊರೊನಾ ವೈರಸ್ ಸಂಬಂಧ ದೇಶದಲ್ಲಿ ಲಾಕ್ಡೌನ್ ಘೋಷಣೆಯಾದ ಬಳಿಕ ದೇಗುಲಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿತ್ತು. ದೇಗುಲವು ಆರು ತಿಂಗಳಿನ ಬಳಿಕ ಸಾಮಾನ್ಯ ಭಕ್ತರಿಗೆ ತೆರೆದುಕೊಳ್ಳುತ್ತಿದೆ.

ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಕಟ್ಟುನಿಟ್ಟಾಗಿ ಅಂತರ ಕಾಯ್ದುಕೊಳ್ಳಬೇಕು. ಮುಖಗವಸು ಧರಿಸುವುದು, ನೈರ್ಮಲ್ಯ ಕಾಪಾಡುವುದು ಸೇರಿದಂತೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಆಡಳಿತ ಮಂಡಳಿ ಅಧ್ಯಕ್ಷ ಜಿ.ಕೆ.ಹೆಗಡೆ ಮತ್ತು ಉಪಾಧಿವಂತ ಮಂಡಳಿ ಸದಸ್ಯರು ತಿಳಿಸಿದ್ದಾರೆ.

ದೇವಸ್ಥಾನಕ್ಕೆ ಬರುವ ಪುರುಷರಿಗೆ ಧೋತಿ ಮತ್ತು ಶಲ್ಯ, ಹೆಂಗಸರಿಗೆ ಸೀರೆ ಅಥವಾ ಚೂಡಿದಾರ ಧರಿಸುವುದು ಕಡ್ಡಾಯ ಮಾಡಲಾಗಿದೆ. ಬರ್ಮುಡಾ ಪ್ಯಾಂಟ್, ಜೀನ್ಸ್ ಪ್ಯಾಂಟ್ ಧರಿಸಿ ಬಂದವರಿಗೆ ದೇವಸ್ಥಾನ ಪ್ರವೇಶವನ್ನು ನಿರ್ಬಂಧಿಸಿ ಪರಿಷ್ಕೃತ ವಸ್ತ್ರಸಂಹಿತೆಯನ್ನು ಈಗಾಗಲೇ ಜಾರಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.