ಗೋಕರ್ಣ: ಇಲ್ಲಿಯ ಮೇನ್ ಬೀಚಿನಲ್ಲಿರುವ ವಾಹನ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಿದ ಬಗ್ಗೆ ಎರಡೂ ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ಇಬ್ಬರೂ ಪರಸ್ಪರ ದೂರು ದಾಖಲಿಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಮ್ ನಿವಾಸಿ ದೀಪಾ ಎ. ಅಶ್ವಥನಾರಾಯಣ ದೂರು ನೀಡಿದ್ದು, ವಾಹನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದಾಗ ಎದುರಿನ ಅಂಗಡಿಯವರು ವಾಹನ ತೆಗೆಯಲು ಹೇಳಿದ್ದಾರೆ. ಅದನ್ನು ಪ್ರಶ್ನಿಸಿದ ವಾಹನ ಚಾಲಕ ಗಣೇಶ ಜಿ.ಕೆ ಅವರಿಗೆ ಸೂರತ್ ದೇಶಭಂಡಾರಿ ಮತ್ತು ಇತರೆ ಇಬ್ಬರು ಬಾಟಲಿಯಿಂದ ತಲೆಗೆ ಹೊಡೆದು ಗಾಯಗೊಳಿಸಿದ್ದಲ್ಲದೇ ಅವರನ್ನು ಬಿಡಿಸಲು ಬಂದ ಸುರೇಶಕುಮಾರ್ ಎ. ಅಂಜಿನಪ್ಪ ಅವರಿಗೂ ಹೊಡೆದು ಗಂಭೀರ ಗಾಯಗೊಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದಕ್ಕೆ ವಿರುದ್ಧವಾಗಿ ಪಾರ್ಕಿಂಗ್ ಸ್ಥಳದಲ್ಲಿರುವ ಅಂಗಡಿಯ ಚಂಪಾ ಸೂರತ್ ದೇಶಭಂಡಾರಿ ಎಂಬುವವರು ಪ್ರತಿ ದೂರು ನೀಡಿದ್ದು, ಅಂಗಡಿಯ ಮುಂದೆ ವಾಹನ ನಿಲ್ಲಿಸಬೇಡಿ. ಬೇರೆ ಸ್ಥಳಕ್ಕೆ ತೆಗೆದುಕೊಂಡು ಹೋಗಿ ಎಂದು ಹೇಳಿದ್ದರಿಂದ ಸಿಟ್ಟಿಗೆದ್ದ ವಾಹನ ಚಾಲಕ ಬೆಂಗಳೂರಿನ ಗಣೇಶ ಜಿ.ಕೆ ಮತ್ತು ವಾಹನದಲ್ಲಿದ್ದ ಸುರೇಶ ಕುಮಾರ್ ಹಾಗೂ ದೀಪಾ ಅಶ್ವಥನಾರಾಯಣ ನನಗೆ ಮತ್ತು ನನ್ನ ಪತಿಯ ಮೇಲೆ ಹಲ್ಲೆ ಮಾಡಿದ್ದಲ್ಲದೇ, ಅವಾಚ್ಯ ಪದಗಳಿಂದ ನಿಂದಿಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-20-1660239619

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.