ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊನ್ನಾವರ: ₹25 ಲಕ್ಷ ಮೌಲ್ಯದ ಚಿನ್ನ,ಬೆಳ್ಳಿ ಕಳವು

Published 1 ಮೇ 2024, 12:18 IST
Last Updated 1 ಮೇ 2024, 12:18 IST
ಅಕ್ಷರ ಗಾತ್ರ

ಹೊನ್ನಾವರ: ತಾಲ್ಲೂಕಿನ ಮಂಕಿ ಗುಳದಕೇರಿಯಲ್ಲಿ ಶ್ರೀ ಕಾಮಾಕ್ಷಿ ಜ್ಯೂಯಲರ್ಸ್ ಅಂಗಡಿಯ ಶಟರ್ ಮುರಿದು ಅಂಗಡಿಯೊಳಗಿದ್ದ ₹25 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಕಳವು ಮಾಡಲಾಗಿದೆ.

ಏ.29ರ ರಾತ್ರಿ ಘಟನೆ ನಡೆದಿದ್ದು ಘಟನೆಗೆ ಸಂಬಂಧಿಸಿದಂತೆ ಅಂಗಡಿಯ ಮಾಲೀಕ ಅಣ್ಣಪ್ಪ ಪ್ರಭಾಕರ ಶೇಟ್ ಮಂಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

‘296 ಗ್ರಾಂ ತೂಕದ ಅಂದಾಜು ₹14.55 ಲಕ್ಷ ಮೌಲ್ಯದ ಚಿನ್ನದ ಆಭರಣಗಳು ಮತ್ತು ಬಂಗಾರದ ಗಟ್ಟಿ ಹಾಗೂ 22.5 ಕೆ.ಜಿ.ತೂಕದ ₹11.10 ಲಕ್ಷ ಮೌಲ್ಯದ ಬೆಳ್ಳಿ ಆಭರಣಗಳು ಕಳುವಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಕರಣ ದಾಖಲಿಸಿದ್ದು ಆರೋಪಿಗಳ ಪತ್ತೆಗೆ 2 ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT