ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಸಿ: ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ

Published : 25 ಸೆಪ್ಟೆಂಬರ್ 2024, 14:37 IST
Last Updated : 25 ಸೆಪ್ಟೆಂಬರ್ 2024, 14:37 IST
ಫಾಲೋ ಮಾಡಿ
Comments

ಶಿರಸಿ: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಗೆ ಬುಧವಾರ ನಗರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ರಥವು ನಗರ ಪ್ರವೇಶಿಸುತ್ತಿದ್ದಂತೆ ಯಲ್ಲಾಪುರ ನಾಕಾದಲ್ಲಿ ಕನ್ನಡ ಜ್ಯೋತಿ ರಥವನ್ನು ಜಿಲ್ಲಾಡಳಿತ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದಿಂದ ಬರಮಾಡಿಕೊಳ್ಳಲಾಯಿತು.

ನಗರದ ವಿವಿಧ ಭಾಗಗಳಲ್ಲಿ ಸಂಚರಿಸಿ, ಶಿವಾಜಿ ಚೌಕಕ್ಕೆ ಆಗಮಿಸಿದಾಗ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಭುವನೇಶ್ವರಿ ದೇವಿಗೆ ಮಾಲಾರ್ಪಣೆ ಮಾಡಿ ದೀಪ ಬೆಳಗಿಸಿದರು. ನಂತರ ಮಾತನಾಡಿದ ಅವರು, ರಥವು ಶಿರಸಿ ಮಾರ್ಗವಾಗಿ ಹಾನಗಲ್ ಮೂಲಕ ಹಾವೇರಿಗೆ ತಲುಪಲಿದೆ. ಜಿಲ್ಲೆಯಲ್ಲಿ ರಥಯಾತ್ರೆಯನ್ನು ಉತ್ಸವದ ರೀತಿಯಲ್ಲಿ ನಡೆಸಲಾಗಿದೆ ಎಂದರು.

ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ವಾಸರೆ, ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ, ನಗರಸಭೆ ಉಪಾಧ್ಯಕ್ಷ ರಮಾಕಾಂತ ಭಟ್, ಸ್ಥಾಯಿ ಸಮಿತಿ ಅಧ್ಯಕ್ಷ ಕುಮಾರ ಬೋರಕರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ, ಉಪವಿಭಾಗಾಧಿಕಾರಿಕ್ತೆ ಕೆ.ವಿ.ಕಾವ್ಯಾರಾಣಿ ಇದ್ದರು. ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಸುಬ್ರಾಯ ಭಟ್ ಬಕ್ಕಳ ಪ್ರಾಸ್ತಾವಿಕ ಮಾತನಾಡಿದರು. ತಹಶೀಲ್ದಾರ್‌ ಶ್ರೀಧರ ಮುಂದಲಮನಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT