ಶಿರಸಿ: ‘ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಸೇವಾ ಸಮಿತಿ ಶಿರಸಿ ವಿಭಾಗ ಹಾಗೂ ಶಿರಸಿ ತಾಲ್ಲೂಕು ಆರ್ಯ, ಈಡಿಗ, ನಾಮಧಾರಿ ಮತ್ತು ಬಿಲ್ಲವ ಸಮಾಜ ಅಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಗುರುವಂದನೆ ಹಾಗೂ ಮಠದ ನೂತನ ಟ್ರಸ್ಟಿಗಳಿಗೆ ಅಭಿನಂದನಾ ಸಮಾರಂಭ ಜ.9ರಂದು ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ’ ಎಂದು ಸಂಘದ ಅಧ್ಯಕ್ಷ ವೆಂಕಟೇಶ ನಾಯ್ಕ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಅಂದು ಬೆಳಿಗ್ಗೆ 11 ಗಂಟೆಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಮಹಾಮಂಡಲೇಶ್ವರ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಮಠದ ನೂತನ ಟ್ರಸ್ಟಿಗಳಾಗಿ ಆಯ್ಕೆಯಾದ ಶಾಸಕ ಭೀಮಣ್ಣ ಬಿ. ನಾಯ್ಕ, ಕುಮಟಾ ರಾಮ ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ವಿ.ಆರ್. ನಾಯ್ಕ, ಮೆಸ್ಕಾಂ ಅಧ್ಯಕ್ಷ ಹರೀಶಕುಮಾರ ಬೆಳ್ತಂಗಡಿ, ಸಮಾಜ ಸೇವಕಿ ಸುಜಾತಾ ವಸಂತ ಬಂಗೇರ, ಉದ್ಯಮಿ ಕೆ. ಚಂದ್ರು ಪೂಜಾರಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ರಾಜ್ಯ ಅಧ್ಯಕ್ಷ ಮಂಜುನಾಥ ಪೂಜಾರಿ ಅವರಿಗೆ ಗೌರವ ಸನ್ಮಾನ ಸಲ್ಲಿಸಲಾಗುವುದು’ ಎಂದರು.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಲಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಶಾಸಕರಾದ ದಿನಕರ ಶೆಟ್ಟಿ, ಸತೀಶ ಸೈಲ್ ಹಾಗೂ ರಾಜ್ಯ ಆರ್ಯ ಈಡಿಗ ಮಹಾಸಭಾದ ಅಧ್ಯಕ್ಷ ತಿಮ್ಮೇಗೌಡ ಮುಂತಾದವರು ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ನಾಮಧಾರಿ ಅಭಿವೃದ್ಧಿ ಸಂಘಗಳ ಮತ್ತು ಶ್ರೀರಾಮ ಕ್ಷೇತ್ರ ಸೇವಾ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

ಸಮಿತಿಯ ಪದಾಧಿಕಾರಿಗಳಾದ ರವೀಂದ್ರ ಜಿ. ನಾಯ್ಕ, ಗಣಪತಿ ನಾಯ್ಕ ದೇವಿಕೆರೆ, ಶೋಭಾ ನಾಯ್ಕ, ಶ್ರೀನಿವಾಸ ನಾಯ್ಕ, ನಾರಾಯಣ ನಾಯ್ಕ ಹಾಗೂ ಆರ್.ಜಿ. ನಾಯ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.