ಶಿರಸಿ: ‘ಗಡಿ ವಿವಾದ ವಿಚಾರದಲ್ಲಿ ಕೇಂದ್ರ ಗೃಹ ಸಚಿವರು ಕರ್ನಾಟಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆ ಕರೆದಿರುವುದು ಅಪರಾಧ. ಸಭೆಗೆ ತೆರಳಿದ್ದು ಮುಖ್ಯಮಂತ್ರಿ ಬೊಮ್ಮಾಯಿ ಮಾಡಿರುವ ಪ್ರಮಾದ’ ಎಂದು ಶಾಸಕ ಎಚ್.ಕೆ.ಪಾಟೀಲ ಅಭಿಪ್ರಾಯಪಟ್ಟರು.
ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗಡಿ ವಿವಾದ ವಿಚಾರದಲ್ಲಿ ಸುಪ್ರಿಂಕೋರ್ಟ್ ಮಹಾರಾಷ್ಟ್ರದ ವಾದವನ್ನು ಎರಡು ಬಾರಿ ತಳ್ಳಿಹಾಕಿದೆ. ಇಂತಹ ಸಂದರ್ಭದಲ್ಲಿ ಅಶಾಂತಿ ಇದೆ ಎಂಬುದನ್ನು ಬಿಂಬಿಸಲು ಪ್ರಯತ್ನ ನಡೆದಿದೆ. ಅದಕ್ಕಾಗಿ ಕೇಂದ್ರ ಸರ್ಕಾರ ಸಮಿತಿ ರಚಿಸಲು ಹೊರಟಿದೆ. ಇದಕ್ಕೆ ರಾಜ್ಯ ಸರ್ಕಾರ ಸಮ್ಮತಿಸಬಾರದು’ ಎಂದು ಒತ್ತಾಯಿಸಿದರು.
‘ಗಡಿ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಅಥವಾ ಮಹಾಜನ ಆಯೋಗದ ವರದಿಯನ್ನು ಜಾರಿಗೊಳಿಸಬೇಕು ಎಂಬುದು ಕರ್ನಾಟಕದ ಧ್ಯೇಯವಾಗಿದೆ. ಇದಕ್ಕೆ ರಾಜ್ಯ ಸರ್ಕಾರ ಬದ್ಧವಾಗಿರಬೇಕು. ಅದರ ಹೊರತಾದ ಯಾವುದೇ ಪ್ರಕ್ರಿಯೆಗೆ ಸರ್ಕಾರ ಒಪ್ಪಬಾರದು. ಈ ಅಂಶಗಳನ್ನೇ ಪ್ರಧಾನಮಂತ್ರಿ, ಕೇಂದ್ರ ಗೃಹ ಸಚಿವರಿಗೆ ಸ್ಪಷ್ಟಪಡಿಸಬೇಕು’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.